ಭದ್ರಾವತಿ: ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಸೋಮವಾರ ಶಾಸಕ ಬಿ.ಕೆ.ಸಂಗಮೇಶ್ವರ್ ಸನ್ಮಾನಿಸಿ ಗೌರವಿಸಿದರು.
ಲೋಯರ್ ಹುತ್ತಾ ಪೂರ್ಣಪ್ರಜ್ಞ ಪ್ರೌಢ ಶಾಲೆಯ ಮೋಹಿತ್ 620, ನ್ಯೂಟೌನ್ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಶಾಲೆಯ ದೀಕ್ಷಾ 616, ಹೊಸಮನೆ ಸೈಂಟ್ ಮೇರಿಸ್ ಪ್ರೌಢಶಾಲೆ ಪ್ರಜ್ವಲ್ 616, ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ ಶಾಲೆಯ ಅಂಜುಮ್ 616 ಅಂಕಗಳನ್ನು ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿರುವುದನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶಂಶಿಸಿದರು.
ನಂತರ ಮಾತನಾಡಿ,ಮುಂದಿನ ವಿದ್ಯಾಭ್ಯಾಸ ಉತ್ತಮವಾಗಿರಲಿ ಎಂದು ಹಾರೈಸಿ, ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ದೇಶದ ಆತ್ಯುನತ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಣಿ ಶೇಖರ್, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ. ಸಮನ್ವಯಾಧಿಕಾರಿ ವಿ.ಎಚ್.ಪಂಚಾಕ್ಷರಿ ಹಾಗೂ ತಾಲೂಕ್ ನೋಡಲ್ ಅಧಿಕಾರಿ ರವಿಕುಮಾರ್ ಎಸ್ ಕೆ ಹಾಜರಿದ್ದರು.