
ಶಿವಮೊಗ್ಗ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ನೊ) ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾದ ರುದ್ರಮುನಿ ಸಜ್ಜನ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದಿಂದ ಅಭಿನಂದನೆ ಮಾಡಲಾಯಿತು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಸ್ಥಾಪಕ ಅಧ್ಯಕ್ಷ ರುದ್ರಮುನಿ ಸಜ್ಜನ್ ಅವರು ಅತ್ಯಂತ ಹೆಚ್ಚಿನ ಮತಗಳನ್ನು ಪಡೆದು ಅಭೂತಪೂರ್ವ ವಿಜಯವನ್ನು ದಾಖಲಿಸಿ ಸತತ ನಾಲ್ಕನೆ ಬಾರಿಗೆ ಆಯ್ಕೆಯಾದ ಹಿನ್ನಲೆಯಲ್ಲಿ ರುದ್ರಮುನಿ ಸಜ್ಜನ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ (ನೊ) ದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾಸಭಾವನ್ನು ಇನ್ನೂ ಶಕ್ತಿಯುತವಾಗಿ ಕಟ್ಟಲು ಸಮಾಜದ ಎಲ್ಲಾ ಒಳ ಪಂಗಡಗಳು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.


ಸಂಘದ ಅಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿ, ಮಹಾಸಭಾವು ರುದ್ರಮುನಿ ಸಜ್ಜನ್ ಅವರ ಸಾರಥ್ಯದಲ್ಲಿ ಹಿಂದೆಯೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಅವರ ಪುನರಾಯ್ಕೆ ಅವರ ಪರಿಶ್ರಮ ಹಾಗು ಸಂಘಟನಾ ಚತುರತೆಗೆ ಸಾಕ್ಷಿಯಾಗಿದೆ. ಮುಂದೆಯೂ ಕೂಡ ಇನ್ನೂ ಹೆಚ್ಚಿನ ಕೆಲಸ ಕಾರ್ಯಗಳು ಆಗಲಿ ಹಾಗು ಅವರ ಅಪಾರವಾದ ಅನುಭವ ಮಹಾಸಭಾವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವಲ್ಲಿ ಅತ್ಯಂತ ಅವಶ್ಯಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಹಿರಿಯ ರೇವಪ್ಪನವರು, ಖಜಾಂಚಿ ರವಿ ಅಜ್ಮನಿ, ನಿರ್ದೇಶಕ ಎಸ್.ಎಸ್.ಸತೀಶ್, ರವೀಶ್ ಹಾಗೂ ಪುಷ್ಪ ಮತ್ತು ಕಾರ್ಯದರ್ಶಿ ಕಿರಣ್ ಸಜ್ಜನ್ ಹಾಜರಿದ್ದರು.