ಭದ್ರಾವತಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಚುನಾವಣೆ ಸಿದ್ಧತೆಗಾಗಿ ಜಿಲ್ಲೆಗೆ ಬಂದರು.
ತಾಲ್ಲೂಕಿನ ಸಮೀಪದ ಕಾರೇಹಳ್ಳಿ ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು.
ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಗೀತಾ ಶಿವರಾಜ್ಕುಮಾರ್ ಬಂದಿದ್ದು, ಪಕ್ಷದಿಂದ ಭರ್ಜರಿ ಸ್ವಾಗತ ದೊರೆಯಿತು.
ನಟ ಶಿವರಾಜ್ ಕುಮಾರ್, ಸಚಿವ ಮಧುಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಎಲ್ಲಾ ಸಮಾಜದ ಸಂಘ, ಸಂಸ್ಥೆಗಳು, ಸಂಘಟನೆಗಳು, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ಮತ್ತು ಮಹಿಳಾ ಸಂಘಟನೆಗಳು, ಕಾರ್ಮಿಕರು, ರೈತ ಮುಖಂಡರು, ಯುವಕರು ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮಾಂತರ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಗೂ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು, ನಗರಸಭೆ ಕಾಂಗ್ರೆಸ್ ಪಕ್ಷದ ಹಾಲಿ ಮತ್ತು ಮಾಜಿ ಸದಸ್ಯರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರುಗಳು, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಮತ್ತು ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಹಾಲಿ ಮತ್ತು ಮಾಜಿ ಸದಸ್ಯರುಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು