
ದಾವಣಗೆರೆ: ಕಾಂಗ್ರೆಸ್ ನೇತೃತ್ವದ ಸರಕಾರ ದಿವಾಳಿಯಾಗಿದೆ ಎಂದು ಕುಡಚಿ ಶಾಸಕ ಪಿ.ರಾಜೀವ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,
ಕರ್ನಾಟಕ ರಾಜ್ಯ ಸಾಲದ ಸುಳಿಯಲ್ಲಿ ಸಿಲುಕುತ್ತಿದೆ. ಆದರೆ ಸಿದ್ದರಾಮಯ್ಯ ರಾಜ್ಯವನ್ನು ಹಿಮಾಚಲ ಪ್ರದೇಶ ರಾಜ್ಯದ ರೀತಿಯಲ್ಲಿ ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದ್ದಾರೆ. ಅಲ್ಲದೇ ರಾಜ್ಯಪಾಲರ ಬಾಯಲ್ಲಿ ಆರ್ಥಿಕ ಸದೃಢತೆ ಎಲ್ಲಿಂದ ಬರುತ್ತದೆ ಎಂದು ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹೇಗಾದರೂ ಮಾಡಿ ಅಧಿಕಾರ ಹಿಡಿಯಲು ಹೋಗಿ ಐದು ಗ್ಯಾರಂಟಿ ಘೋಷಿಸಿ ಈಗ ಎಸ್ ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ.ಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಇದರಿಂದ ಎಸ್.ಸಿ., ಎಸ್ .ಟಿ.ಗಳಿಗೆ ದೊಡ್ಡ ಅನ್ಯಾಯವಾಗಿದೆ. .


ಎಸ್ಸಿ-ಎಸ್ಟಿ ಜನಸಂಖ್ಯೆಯ ಆಧಾರಿತ ಅಯಾ ರಾಜ್ಯಗಳು ಅನುದಾನ ಮೀಸಲಿಡಬೇಕೆಂದು ಕೇಂದ್ರ ಸರ್ಕಾರದ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಇದಾವುದನ್ನು ಪಾಲಿಸುತ್ತಿಲ್ಲ. ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ವರ್ಗಕ್ಕೆ ಎಷ್ಟು ಹಣ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.
ಈ ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಅನುದಾನ ಬರುತ್ತಿತ್ತು. ಆದರೆ, ಈಗ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬರುತ್ತಿಲ್ಲ. ಅಷ್ಟೇ ಅಲ್ಲ, ಯಾವುದೇ ನಿಗಮ ಮಂಡಳಿಗಳಿಗೂ ನೀರು ಕುಡಿಯಲು ಹಣ ಹೊಂದಿಸುವಷ್ಟು ಕೆಳಮಟ್ಟಕ್ಕೆ ಕಾಂಗ್ರೆಸ್ ಸರ್ಕಾರ ಅಧೋಗತಿಗೆ ಇಳಿದಿದೆ.
ಎಲ್ಲಾ ವರ್ಗಕ್ಕೂ ನೀಡಬೇಕಾದ ಅನುದಾನ ಇರಲಿ, ಪರಿಶಿಷ್ಟ ಜಾತಿ, ಪಂಗಡದ ಉಪ ಯೋಜನೆಗಳಿಗೆ ನೀಡುತ್ತಿದ್ದ ಅನುದಾನ ನೀಡುತ್ತಿಲ್ಲ ಎಂದು ಕಿಡಿಕಾರಿದರು.
ಎಲ್ಲದಕ್ಕೂ ಕಡ್ಡಿ ಆಡಿಸುವ ಪ್ರಿಯಾಂಕ ಖರ್ಗೆ ಅವರೇ, ಈಗ ಯಾಕೆ ಸುಮ್ಮನ್ನಿದ್ದೀರಿ. ಮಾತನಾಡಿ. ನಿಮ್ಮ ಸರ್ಕಾರ ಯಾವ ಸ್ಥಿತಿಗೆ ಬಂದಿದೆ ಎಂದರೆ, ಭಿಕ್ಷುಕನ ತಟ್ಟೆಗೆ ಕೈ ಹಾಕಿದಂತೆ. ಇದರ ಪರಿಣಾಮವಾಗಿ ಪರಿಶಿಷ್ಟ ಜಾತಿ, ಪಂಗಡಗಳ ಜನರಿಗೆ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಗಂಗಾ ಕಲ್ಯಾಣ, ಭೂ ಒಡೆತನ, ಹೈನುಗಾರಿಕೆ, ವಸತಿ ಸೇರಿದಂತೆ ಯಾವುದೇ ಯೋಜನೆಗಳು ಜಾರಿ ಆಗಿಲ್ಲ. ಇದನ್ನು ಬಿಜೆಪಿ ಉಗ್ರವಾಗಿ ಖಂಡನೆ ಮಾಡುತ್ತದೆ ಎಂದು ಹೇಳಿದರು.
ಸಂಬಳ ಕೊಡಲು ಹಣವಿಲ.
ಕಾಂಗ್ರೆಸ್ ಸರಕಾರದಲ್ಲಿ ಸಂಬಳ ಕೊಡಲು ಸಾಲ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಕುಡುಚಿ ಮಾಜಿ ಶಾಸಕ ಪಿ.ರಾಜೀವ್ ಹೇಳಿದರು.ರಾಜ್ಯಪಾಲರಿಂದ ಹಗಲು ಸುಳ್ಳು ಹೇಳಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವು ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳಿಸಿಕೊಂಡಿದೆ. ಒಟ್ಟಾರೆ ಹೇಳುವುದಾದರೆ ಸಂಬಳ ಕೊಡಲು ಸಾಲ ಮಾಡುವ ಸರ್ಕಾರ ಇದಾಗಿದ್ದು, ಆರ್ಥಿಕ ಸದೃಢತೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.ಸದ್ಯದ ಬೆಳವಣಿಗೆ ಗಮನಿಸಿದರೆ ಕಾಂಗ್ರೆಸ್ ನೇತೃತ್ವದ ಸರ್ಕಾರವು ದಿವಾಳಿ ಆಗಿದೆ ಎಂದರು.
ಸುದ್ದಿಗೋಷ್ಠಿ ಯಲ್ಲಿ ರಾಜ್ಯ ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಎನ್.ರಾಜಶೇಖರ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ಮಾಜಿ ಶಾಸಕರಾದ ಹೆಚ್.ಪಿ.ರಾಜೇಶ್, ಎಸ್.ವಿ.ರಾಮಚಂದ್ರ, ಮಾಜಿ ಸಚೇತಕ ಡಾ.ಎ.ಹೆಚ್.ಶಿವಯೋಗಿ ಸ್ವಾಮಿ, ಬಿ.ಎಂ.ಸತೀಶ್ ಕೊಳೇನಹಳ್ಳಿ, ಲೋಕಿಕೆರೆ ನಾಗರಾಜ್, ಶ್ರೀನಿವಾಸ್ ದಾಸಕರಿಯಪ್ಪ, ಅನಿಲ್ ಕುಮಾರ್ ನಾಯ್ಕ, ರಮೇಶ್ ನಾಯ್ಕ, ಆರ್.ಎಲ್.ಶಿವಪ್ರಕಾಶ್, ಧನಂಜಯ ಕಡೆಲೆಬಾಳು ಇತರರು ಇದ್ದರು.