ದಾವಣಗೆರೆ : ಇಷ್ಟು ದಿನ ತನ್ನ ಸೋಲಿಗೆ ಇವಿಎಂ ಮೇಲೆ ಆರೋಪ ಮಾಡಿದ್ದ ಕಾಂಗ್ರೆಸ್ ಈಗ ಹೊಸ ಆರೋಪ ಹುಡುಕುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ದಾವಣಗೆರೆಯಲ್ಲಿ ನಡೆದ  ವಿಜಯ ಸಂಕಲ್ಪಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿ, ಕಾಂಗ್ರೆಸ್ ತನ್ನ ಸೋಲಿಗೆ ಇವಿಎಂ ಕಾರಣ ಎಂದು ತನ್ನ ಕಾರ್ಯಕರ್ತರನ್ನು ಸಂತೈಸುತ್ತಿತ್ತು. ಆದರೆ ಯಾವಾಗ ಸುಪ್ರೀಂ ಕೋರ್ಟ್ ತೀರ್ಪು ನೀಡಿತೋ ಆಗಿನಿಂದ ಕಾಂಗ್ರೆಸ್ ಹೊಸ ವರಸೆ ಶುರು ಮಾಡಿದೆ.ಕಾಂಗ್ರೆಸ್  ಠೇವಣಿ ಕಳೆದುಕೊಂಡರೆ ಇವಿಎಂ ಕಾರಣ ಎಂದು  ಹೇಳುತ್ತದೆ. ಅಲ್ಲದೇ  ಮೋದಿ ಗೆಲುವಿಗೆ ಇವಿಎಂ ಕಾರಣ ಎಂದು ಹೇಳುತ್ತದೆ. ಆದರೀಗ ಬೇರೆ ಕಾರಣವನ್ನು ಕಾಂಗ್ರೆಸ್ ಹುಡುಕುತ್ತಿದೆ ಎಂದು ಪ್ರಧಾನಿ ಹೇಳಿದರು.

ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ 

ದಾವಣಗೆರೆ ಕ್ಷೇತ್ರದ ಜನರನ್ನು ಅಭಿನಂದಿಸಿ ಭಾಷಣ ಆರಂಭಿಸಿದ ಪ್ರಧಾನಿ ಕನ್ನಡದಲ್ಲಿ ಮಾತು ಆರಂಭಿಸಿದರು. ತಾಯಿ ಭುವನೇಶ್ವರಿ, ಈ ಕ್ಷೇತ್ರದ ಎಲ್ಲಾ ಮಠಗಳಿಗೆ ಭಕ್ತಿಪೂರ್ವಕ ನಮನ ಸಲ್ಲಿಸುತ್ತೇನೆ ಎಂದರು.  ನಿಮ್ಮ ಪ್ರೀತಿಗೆ ನಾನು ಚಿರಋಣಿ.  ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಮತದಾನ ನಡೆದಿದೆ. ಕರ್ನಾಟಕದ ಮಹಿಳಾ ಮತದಾರರು ಸೇರಿದಂತೆ ಎಲ್ಲಾ ಮತದಾರರು ಅಭೂತಪೂರ್ವವಾಗಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಇದು ಕಾಂಗ್ರೆಸ್‌ ನಿದ್ದೆಗೆಡಿಸಿದೆ. 

ಮೊದಲ ಹಂತದ ಮತದಾನದ ಬಳಿಕ ಕಾಂಗ್ರೆಸ್ ಖಾತೆ ತೆರೆಯುವುದೇ ಅನುಮಾನವಾಗಿ ಕಾಣಿಸುತ್ತಿದೆ. ದಾವಣಗೆರೆ ಮತದಾರರು ಕೂಡ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್ ಒಳಗಿನ ಆತಂರಿಕ ಯುದ್ಧ ರಸ್ತೆಗೆ ಬರಲಿದೆ. ಈ ದಿನ ದೂರವಿಲ್ಲ. 

ಕಳೆದ 10 ವರ್ಷದಲ್ಲಿ ಈ ದೇಶದ ಜನರು ಪ್ರಧಾನಿ ಮೋದಿಯನ್ನು ಇಂಚಿಂಚು ವಿಮರ್ಶೆ ಮಾಡಿದ್ದಾರೆ. ಇದೀಗ ಮೋದಿ ಯಾರು, ಮೋದಿ ಆಡಳಿತ ಏನು? ಅನ್ನೋದು ಗೊತ್ತಾಗಿದೆ. ನನಗೆ 2014ರಲ್ಲಿ, 2019ರಲ್ಲಿ ನೋಡದ ಈ ಪ್ರೀತಿ, ವಿಶ್ವಾಸವನ್ನು ಈಗ ನಾನು ನಿಮ್ಮಲ್ಲಿ ನೋಡುತ್ತಿದ್ದೇನೆ.ದಾವಣಗೆರೆಯ ಬೆಣ್ಣೆ ದೋಸೆ ಬಾಯಲ್ಲಿ ನೀರೂರಿಸುತ್ತದೆ. ಜೂನ್ 4 ರಂದು ದಾವಣೆಗೆರೆ ಬೆಣ್ಣೆ ದೋಸೆ ಸವಿಯಲು ರೆಡಿಯಾಗಿ ಎಂದು ಪ್ರಧಾನಿ ಹೇಳಿದರು. 

ಇಂಡಿಯಾ ಒಕ್ಕೂಟದಲ್ಲಿ ಸರಿಯಾದ ವಿಷನ್ ಇಲ್ಲ , ಗುರಿ ಇಲ್ಲ. ನಾಯಕರ ನಡುವೆ ಹೊಂದಾಣಿಕೆ ಇಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಒಂದೊಂದು ವರ್ಷ ಒಂದೊಂದು ಪ್ರಧಾನ ಮಂತ್ರಿಗಳು ಆಡಳಿತ ನಡೆಸುತ್ತಿದ್ದಾರೆ. ಆದ್ದರಿಂದ  ನಿಮ್ಮ ಅಮೂಲ್ಯ ಮತವನ್ನು ಹಾಳುಮಾಡಬೇಡಿ ಎಂದು ಮೋದಿ ಮನವಿ ಮಾಡಿದರು.

ಬಸವಣ್ಣನ ಭೂಮಿಯಲ್ಲಿ ಕಾಂಗ್ರೆಸ್ ತಪ್ಪು ಮಾಡಿದೆ

ಇದೇವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ. ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಗಾಗಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮೀಸಲಿಟ್ಟಿದ್ದ ಹಣವನ್ನು 11 ಸಾವಿರ ಕೋಟಿಯನ್ನು ರದ್ದು ಪಡಿಸಿದರು. ಬಸವಣ್ಣನ ಭೂಮಿಯಲ್ಲಿ ಕಾಂಗ್ರೆಸ್ ತಪ್ಪು ಮಾಡಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಇತರರು‌ ಇದ್ದರು

Share.
Leave A Reply

Exit mobile version