ದಾವಣಗೆರೆ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ದಂಪತಿಯನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸಾಗಿಸುವ ಮೂಲಕ ಸಂಸದ ಜಿ.ಎಂ.ಸಿದ್ದೇಶ್ವರ್ ಅವರ ಪುತ್ರ ಜಿ.ಎಸ್.ಅನೀತ್ ಮಾನವೀಯತೆ ಮೆರೆದಿದ್ದಾರೆ.
ತಾಲ್ಲೂಕಿನ ಎಲೆಬೇತೂರು ಗ್ರಾಮದ ಹತ್ತಿರ ಆಸ್ಮಿಕವಾಗಿ ಬೈಕ್‌ನಲ್ಲಿ ಬಿದ್ದು ಗಾಯಗೊಂಡಿದ್ದ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ಮಹೇಶ್ ಹಾಗೂ ದಂಪತಿಯನ್ನು ತಮ್ಮ ಕಾರಿನಲ್ಲಿ ದಾವಣಗೆರೆ ನಗರದ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಿಸಿ ಮಾನವೀಯತೆ ಮೆರೆದಿದ್ದಾರೆ.