ದಾವಣಗೆರೆ : ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಮೈಸೂರು ಚಲೋ ಬೃಹತ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ದಾವಣಗೆರೆ ಬಿಜೆಪಿ ನಾಯಕ ಜಿ.ಎಸ್.ಅನಿತ್ ಹೆಜ್ಜೆ ಹಾಕಿದರು.
ನಂತರ ಮಾತನಾಡಿದ ಜಿ.ಎಸ್.ಅನಿತ್ ಕುಮಾರ್ ವಾಲ್ಮೀಕಿ ಮತ್ತು ಮುಡಾ ಹಗರಣ ಸಂಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ- ಜೆಡಿಎಸ್ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸುತ್ತಿದೆ. ಆಗಸ್ಟ್ 05 ಕ್ಕೆ ರಾಮನಗರ ಜಿಲ್ಲೆ ಪ್ರವೇಶಿಸಲಾಗಿದೆ. ನಮ್ಮೊಂದಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.
ಪಾದಯಾತ್ರೆ ಮೈಸೂರು ತಲುಪುವುದರ ಒಳಗೆ, ಪಾದಯಾತ್ರೆಗೆ ಸಿಕ್ಕ ಜನಬೆಂಬಲವನ್ನು ನೋಡಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಣ ಬಲ, ತೊಳ್ಬಲ, ಮದ್ಯದ ಬಲದಿಂದಲೇ ‘ಈ ಮುಖ್ಯಮಂತ್ರಿ ಅಧಿಕಾರದಲ್ಲಿ ಇದ್ದಾರೆ. ಹಲವಾರು ಭ್ರಷ್ಟಾಚಾರ ಹಗರಣಗಳಲ್ಲಿ ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಪ್ರಾಮಾಣಿಕವಾಗಿದ್ದರೆ ಕೂಡಲೇ ಸಿದ್ದರಾಮಯ್ಯನವರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು. ಪಾದಯಾತ್ರೆ ಉದಕ್ಕೂ ಕಾರ್ಯಕರ್ತರು ಹಾಗೂ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ, ಜೆಡಿಎಸ್ ನಾಯಕರು, ಶಾಸಕರು ಹಾಗೂ 3 ನೇ ದಿನದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.