ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಬೆಂಕಿ ಹಚ್ಚಿದ ಪ್ರಕರಣ, ನಾಗಮಂಗಲದಲ್ಲಿನ ಗಲಭೆ ಹಿನ್ನೆಲೆ ಎಸ್ಪಿ ಉಮಾಪ್ರಶಾಂತ್ ಇಡೀ ದಾವಣಗೆರೆಯನ್ನು ಪೊಲೀಸ್ ಭದ್ರತೆಯಲ್ಲಿ ಇಟ್ಟುಕೊಂಡಿದ್ದಾರೆ.
ದಾವಣಗೆರೆ ನಗರದಲ್ಲಿ ಸೆ.15 ಕ್ಕೆ ಗಲಾಟೆ ಗಣಪ ಎಂದು ಹೆಸರಾಗಿರುವ ವಿನೋಭನಗರ ಗಣಪತಿ ವಿರ್ಸಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಹಾಗು ಸೆ.16 ಕ್ಕೆ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಎಸ್ಪಿ ಉಮಾಪ್ರಶಾಂತ್ ರಾತ್ರಿ ಹಗಲು ಕೆಲಸ ಮಾಡುತ್ತಿದ್ದಾರೆ. ಒಬ್ಬ ಲೇಡಿಯಾಗಿ ಸಂಸಾರದ ಜತೆ ಸಮಾಜದ ಹಿತ ಕಾಯಲು ದಿನದ 24 ಗಂಟೆ ಕೆಲಸ ಮಾಡುತ್ತಿದ್ದಾರೆ..ಸಿಸಿ ಕ್ಯಾಮೆರಾಗಿಂತ ಎಸ್ಪಿ ಕಣ್ಣು ಇಡೀ ದಾವಣಗೆರೆ ಮೇಲಿದೆ.
ನಗರದಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ‘ಪೊಲೀಸ್ ಪಥ ಸಂಚಲನ’ ಮಾಡಿದ್ದಾರೆ. ಈ ಪೊಲೀಸ್ ಪಥ ಸಂಚಲನವು ವಿನೋಬ ನಗರದ 2ನೇ ಮುಖ್ಯ ರಸ್ತೆಯ ಗಣೇಶ ದೇವಾಸ್ಥಾನದಿಂದ ಆರಂಭವಾಗಿ ಹಳೆ ಪಿ ಬಿ ರಸ್ತೆ, ಅರುಣ ವೃತ್ತ, ರಾಮ್ & ಕೋ ವೃತ್ತ, ಚರ್ಚ್ ರಸ್ತೆ, ವಿನೋಬ ನಗರ ಒಂದನೆ ಮುಖ್ಯ ರಸ್ತೆ ಮೂಲಕ ಸಾಗಿ ಹಳೆ ಪಿಬಿ ರಸ್ತೆಗೆ ಬಂದು ಅರುಣ ವೃತ್ತಕ್ಕೆ ಮುಕ್ತಾಯವಾಗಿತು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಸಂತೋಷ, ನಗರ ಡಿವೈಎಸ್ಪಿ ಶ್ರೀ ಮಲ್ಲೇಶ್ ದೊಡ್ಮನಿ, ಪೊಲೀಸ್ ನಿರೀಕ್ಷಕರುಗಳಾದ ಶ್ರಿ ಗುರುಬಸವರಾಜ, ನೆಲವಾಗಲು ಮಂಜುನಾಥ, ಶ್ರೀ ಅಶ್ವಿನ್ ಕುಮಾರ, ಸುನೀಲ್ ಕುಮಾರ್, ನೂರ್ ಅಹಮ್ಮದ್, ಶ್ರೀಮತಿ ಪ್ರಭಾವತಿ, ಶ್ರೀಮತಿ ಮಲ್ಲಮ್ಮ ಚೌಬೆ ರವರು ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು
ಚನ್ನಗಿರಿ: ‘ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ನಡೆಯಲಿದ್ದು, ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗಗಳಲ್ಲಿ ಮೆರವಣಿಗೆ ಸಾಗಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಪಟ್ಟಣದ ವಿವಿಧ ಬೀದಿಗಳಲ್ಲಿ ಶುಕ್ರವಾರ ಮಾರ್ಗ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಈದ್ ಮಿಲಾದ್ ಹಬ್ಬ ಸೆ. 15ರಂದು ನಡೆಯಲಿದ್ದು, ಮುಸ್ಲಿಂ ಸಮುದಾಯದವರು ಈ ಸಂದರ್ಭದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಅದೇ ದಿನ ಹಿಂದೂ ಏಕತಾ ಗಣಪತಿ ಹಾಗೂ ಸೆ. 22ರಂದು ಬಜರಂಗ ದಳದ ಗಣಪತಿ ವಿಸರ್ಜನೆ ಅಂಗವಾಗಿ ಮೆರವಣಿಗೆ ನಡೆಯಲಿದೆ. ಎಲ್ಲ ಧರ್ಮದವರು ಶಾಂತಿ ಕಾಪಾಡಲು ಮುಂದಾಗಬೇಕಾಗಿದೆ. ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರಚೋದನಕಾರಿಯಾಗಿ ಭಾಷಣ ಮಾಡುವುದು ಬೇಡ. ಸಾರ್ವಜನಿಕರ ಶಾಂತಿಗೆ ಭಂಗ ಬಾರದಂತೆ ಮೆರವಣಿಗೆ ನಡೆಸಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ತುಂಬಾ ಅಗತ್ಯ’ ಎಂದು ಹೇಳಿದ್ದಾರೆ.ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ, ಪಿಎಸ್‌ಗಳಾದ ಸುರೇಶ್, ಸೈಫುದ್ಧೀನ್, ಗುರುಶಾಂತಪ್ಪ, ರೂಪ್ಲಿಬಾಯಿ ಉಪಸ್ಥಿತರಿದ್ದರು.
ಈದ್ ಮಿಲಾದ್ ನಿಯಮಗಳನ್ನು ಪಾಲಿಸಲೆಬೇಕು
ದಾವಣಗೆರೆ : ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಾದ್ಯಾಂತ ಮುಸ್ಲೀಂ ಬಾಂಧವರು ಸೋಮವಾರ ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದು, ಈ ಸಂಬಂಧ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಾದ್ಯಾಂತ ಮೆರವಣಿಗೆ, ಪ್ರಾರ್ಥನೆ ಮಾಡುವ ಬಗ್ಗೆ ತಿಳಿದು ಬಂದಿದೆ. ಆದ್ದರಿಂದ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು -ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಈ ಕೆಳಕಂಡ ಅಂಶಗಳನ್ನು ಪಾಲಿಸಲು ಕೋರಿದೆ.
ಈದ್ ಮಿಲಾದ್ ಮೆರವಣಿಗೆ ಮಾಡುವವರು ಪಾಲಿಸಬೇಕಾದ ಅಂಶಗಳು* :-
01) ಈದ್ ಮಿಲಾದ್ ಮೆರವಣಿಗೆ ಈಗಾಗಲೇ ನಿಗಧಿಪಡಿಸಿದ ಮಾರ್ಗಗಳಲ್ಲಿಯೇ ಸಾಗುವುದು ಹಾಗೂ ನಿಗಧಿಪಡಿಸಿದ ಸ್ಥಳದಲ್ಲಿಯೇ ಈದ್ ಮಿಲಾದ್ ಮೆರವಣಿಗೆ ಮುಕ್ತಾಯ ಮಾಡುವುದು.
02) ಈದ್ ಮಿಲಾದ್ ಮೆರವಣಿಗೆ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವಂತಹವರ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ಧಕ್ಷಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು.
03) ಈದ್ ಮಿಲಾದ್ ಹಬ್ಬದ ಸಂಬಂಧ ಜಿಲ್ಲಾ ಮಟ್ಟದಲ್ಲಿ, ಉಪ ವಿಭಾಗ ಮಟ್ಟದಲ್ಲಿ, ಠಾಣಾ ಮಟ್ಟದಲ್ಲಿ ವಿವಿಧ ಕೋಮಿನ ಮುಖಂಡರುಗಳೊಂದಿಗೆ ಸಭೆ ನಡೆಸಿ ಕಾನೂನು & ಸುವ್ಯವಸ್ಥೆ ದಕ್ಕೆ ಬಾರದಂತೆ ಹಬ್ಬಗಳನ್ನು ಆಚರಿಸುವಂತೆ ಈಗಾಗಲೇ ತಿಳಿಸಲಾಗಿರುತ್ತದೆ
04) ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಪ್ರಚೋಧನಕಾರಿ ಹಾಡುಗಳನ್ನು ಹಾಕುವುದು, ಪೋಸ್ಟರ್‌ಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶ ಇರುವುದಿಲ್ಲ. ಈ ಬಗ್ಗೆ ಆಯೋಜಕರು ವಿಶೇಷ ಗಮನ ಹರಿಸುವುದು & ಸೂಕ್ತ ಕ್ರಮ ಕೈಗೊಳ್ಳುವುದು
05) ಈದ್ ಮಿಲಾದ್ ಮೆರವಣಿಗೆ ಸಂಧರ್ಭದಲ್ಲಿ ಸಾರ್ವಜನಿಕ/ಜನ ಸಂದಣಿ ಪ್ರದೇಶಗಳಲ್ಲಿ ಸಿಡಿಮದ್ದುಗಳನ್ನು ಸಿಡಿಸಬಾರದು.
06) ಈದ್ ಮಿಲಾದ್ ಮೆರವಣಿಗೆ ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ತೊಂದರೆಯಾಗುವ ರೀತಿಯಲ್ಲಿ ಮೆರವಣಿಗೆಯನ್ನು ನಡೆಸಬಾರದು.
07) ಈದ್ ಮಿಲಾದ್ ಮೆರವಣಿಗೆಯಲ್ಲಿ ಯಾವುದೇ ವಿದ್ಯುತ್ ಅವಘಡಗಳಾಗಂದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು.
08) ಈದ್ ಮಿಲಾದ್ ಮೆರವಣಿಗೆಯನ್ನು ನಿಗಧಿತ ಸಮಯಕ್ಕೆ ಮುಕ್ತಾಯ ಮಾಡುವುದು ಹಾಗೂ ಈದ್ ಮಿಲಾದ್ ಮೆರವಣಿಗೆ ಮಾರ್ಗಗಳಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು.
09) ಈದ್ ಮಿಲಾದ್ ಹಬ್ಬದ ಸಂಬಂಧ ಈಗಾಗಲೇ ರೌಡಿ ಮತ್ತು ಮತೀಯ ಗೂಂಡಗಳ ಮೇಲೆ ಮುಂಜಾಗೃತ ಕ್ರಮಗಳನ್ನು ಕೈಗೊಂಡು ನಿಗಾ ಇರಿಸಲಾಗಿರುತ್ತದೆ.
10) ಈದ್ ಮಿಲಾದ್ ಮೆರವಣಿಗೆಯಲ್ಲಿ ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಏಕೆಂದರೆ ಮಾನ್ಯ ಘನ ನ್ಯಾಯಲಯವು ಕರ್ಕಶವಾದ ಶಬ್ಧವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ನಿಷೇಧಿಸಿದ್ದು, ಉಲ್ಲಂಘಿಸಿದ್ದಲ್ಲಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು.
11) ಈದ್ ಮಿಲಾದ್ ಮೆರವಣಿಗೆ ಮಾಡುವಾಗ ಸಾರ್ವಜನಿಕ ಆಸ್ತಿ, ಜೀವ ಹಾನಿಯಾಗದಂತೆ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು.
12) ಈದ್ ಮಿಲಾದ್ ಮೆರವಣಿಗೆ ಮಾರ್ಗಗಳಲ್ಲ್ಲಿ ಸ್ವಯಂ ಸೇವಕರನ್ನು ನೇಮಿಸುವುದು
13) ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು ಎಂದು ಎಸ್ಪಿ ಉಮಾಪ್ರಶಾಂತ್ ತಿಳಿಸಿದ್ದಾರೆ.
14) ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಹಬ್ಬವನ್ನು ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.
15) ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೇ ಯಾವುದೇ ಬ್ಯಾನರ್ & ಬಂಟಿಗ್ಸ್ಗಳನ್ನು ಹಾಕಬಾರದು
*ಪೊಲೀಸ್ ಬಂದೋಬಸ್ತ್* :
ಈದ್ ಮಿಲಾದ್ ಮೆರವಣಿಗೆ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ಹಾಗು ಕೆ.ಎಸ್.ಆರ್.ಪಿ ತುಕಡಿಗಳನ್ನು & ಡಿಎಆರ್ ತುಕಡಿಗಳನ್ನು ಅಲ್ಲದೇ ಹೋಮ್ ಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಮೆರವಣಿಗೆ ಉದ್ದಕ್ಕೂ ಸಿಸಿಟಿವಿ ಅಳವಡಿಕೆ, ಮೆರವಣಿಗೆಯ ಸಂಪೂರ್ಣ ಚಿತ್ರಿಕರಣಕ್ಕೆ ವಿಡಿಯೋಗ್ರಾಫರ‍್ಸ್ ಗಳನ್ನು ನಿಯೋಜಿಸಲಾಗಿರುತ್ತದೆ ಅಲ್ಲದೇ ಮೆರವಣಿಗೆಯ ಉದ್ದಕ್ಕೂ ಡ್ರೋನ್ ಕಣ್ಗಾವಲು ಇರಿಸಲಾಗಿರುತ್ತದೆ, ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.