ಭದ್ರಾವತಿ: ಕಾಗದನಗರದ ಉಜ್ಜನಿಪುರ ಸರ್ಕಾರಿ ಪಶ್ಚಿಮ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ವತಿಯಿಂದ ಸರ್ಕಾರಿ ಶಾಲೆಗಳಿಗೆ ರಾಗಿ ಮಾಲ್ಟ್ ಶುಕ್ರವಾರ ವಿತರಿಸಲಾಯಿತು.ಇದೆ ಸಂದರ್ಭದಲ್ಲಿ ಶಾಲೆಯ ಏಳನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಗರಸಭೆ ಸದಸ್ಯ ಬಸವರಾಜ್ ಬಿ.ಆನೆಕೊಪ್ಪ ,ಎಸ್ ಡಿಎಂಸಿ ಅಧ್ಯಕ್ಷ ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಗಳು,ಪೋಷಕರು ಮತ್ತು ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.