ಬೆಂಗಳೂರು : ರಾಜ್ಯದ ಸರಕಾರಿ ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಸುತ್ತೋಲೆ ಹೊರಡಿಸಿದೆ.

ಸರಕಾರಿ ನೌಕರರಿಗೆ ಅನುಕೂಲವಾಗಲು  ಹೆಚ್‌ಆರ್ ಎಂಎಸ್‌ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ.ಈ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದು.

ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆಯ ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಯೋಜನೆಗಳಡಿ ಮಾಡಿಸಿದ ವಿಮಾ ಪಾಲಿಸಿಗಳ ಮಾಹಿತಿಯನ್ನು HRMS-ESS Login ನಲ್ಲಿ ಭರ್ತಿ ಮಾಡಲು ಸಹ ಈಗಾಗಲೇ ತಿಳಿಸಿರುತ್ತಾರೆ.ಆದ್ದರಿಂದ ರಾಜ್ಯ ಸರ್ಕಾರದ ಪ್ರತಿ ಸಿಬ್ಬಂದಿಗಳು ತಮ್ಮದೇ ಆದ ವೇತನ ಚೀಟಿ, ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸದುಪಯೋಗವನ್ನು ಪಡೆದುಕೊಳ್ಳಲು HRMSESS Login (https://hrmsess.karnataka.gov.in) ಪೋರ್ಟಲ್ ನಲ್ಲಿ ಸಹಾಯವಾಗಲಿದೆ. ಆದ್ದರಿಂದ ಪ್ರತಿ ಸಿಬ್ಬಂದಿಗಳು ESS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಈ  ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು ಖಚಿತಪಡಿಸಿಕೊಳ್ಳಲು ತಿಳಿಸಲಾಗಿದೆ. ಅಲ್ಲದೇ  ತಮ್ಮ ಎಲ್ಲಾ ಉದ್ಯೋಗಿಗಳು ಮೇ-2024 ರ ಮೊದಲು ಈ ಪೋರ್ಟಲ್‌ನಲ್ಲಿ ನೋಂದಾಯಿಸಲು ಅನುವು ಮಾಡಿಕೊಡುವ ಜವಾಬ್ದಾರಿ ಡಿಡಿಓರವರದಾಗಿರುತ್ತದೆ

Share.
Leave A Reply

Exit mobile version