ದಾವಣಗೆರೆ: ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ 68 ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಸುವರ್ಣ ಸಂಭ್ರಮವನ್ನು ಡಿ.17 ರ ಸಂಜೆ 6 ಗಂಟೆಗೆ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ದೊಡ್ಮನಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ವಿರಕ್ತಮಠದ ಶ್ರೀ ಬಸವಪ್ರಭು. ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸಲಿದ್ದಾರೆ. ಭುವನೇಶ್ವರಿ ಭಾವಚಿತ್ರವನ್ನು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅನಾವರಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ,ಮೇಯರ್ ವಿನಾಯಕ ಪೈಲ್ವಾನ್, ಪತ್ರಕರ್ತರಾದ ನಾಗರಾಜ್ ಬಡದಾಳ್, ಮಂಜುನಾಥ್ ಏಕಬೋಟೆ ಇನ್ನಿತರ ಗಣ್ಯರು ಉಪಸ್ಥಿತರಿದ್ದು, ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ. ಯಲ್ಲಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಪಕ್ಷಿ ತಜ್ಞ ಡಾ. ಎಸ್. ಶಿಶುಪಾಲ, ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್, ಹಿರಿಯ ಪತ್ರಕರ್ತರಾದ ಮಲ್ಲಿಕಾರ್ಜುನ್ ಕಬ್ಬೂರ್, ಎಂ.ವೈ. ಸತೀಶ್, ಎ. ಯಶವಂತಕುಮಾರ್, ಸತೀಶ್ ಬಡಿಗೇರ್ ಸೇರಿದಂತೆ ವಿವಿಧ ಕ್ಷೇತ್ರಗಳ 20 ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಟೈಲರ್ಸ್ ಗಳಿಗೆ ಕಾರ್ಮಿಕ ಕಾರ್ಡ್ ಗಳನ್ನು ವೀಣಾ ಅವರು ವಿತರಿಸುವರು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕೋಗಳಿ ಕೊಟ್ರೇಶ್ ಅವರಿಂದ ಹಾಸ್ಯ ಕಾರ್ಯಕ್ರಮ ಹಾಗೂ ಭಾರತಿ ವಾದ್ಯವೃಂದದಿಂದ ರಸ ಸಂಜೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳಾದ ಎಂ. ರವಿ, ಅಮ್ಜದ್ ಅಲಿ, ಕೆ.ಹೆಚ್. ಮೆಹಬೂಬ್,ನಾಗರಾಜ್ ಗೌಡ, ದಯಾನಂದ, ಬಾಬುರಾವ್, ರಾಮಣ್ಣ ತೆಲಗಿ, ಸಿದ್ದೇಶ್, ಗಿರಿಧರ್, ಗಿರೀಶ್ ಇನ್ನಿತರರು ಉಪಸ್ಥಿತರಿದ್ದರು

Share.
Leave A Reply

Exit mobile version