ಶಿವಮೊಗ್ಗ;
ಶಿವಮೊಗ್ಗದ ಗಾಂಧಿ ನಗರದ ಬಸವ ಕೇಂದ್ರದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಮುಖಂಡರಾದ ಎಂ. ಶ್ರೀಕಾಂತ್ ಅವರ ನೇತೃತ್ವದಲ್ಲಿ ಇತ್ತೀಚಿಗೆ ಚಿನ್ಮಯಾನುಗ್ರಹ ದೀಕ್ಷೆ ಸ್ವೀಕರಿಸಿದ ಡಾ. ಬಸವ ಮರುಳಸಿದ್ದ ಸ್ವಾಮೀಜಿಯವರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ನಾಗರಾಜ್ ಕಂಕಾರಿ,ಮಾಜಿ ಉಪ ಮೇಯರ್ ಎಚ್. ಪಾಲಾಕ್ಷ, ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಉಪ ಅಧ್ಯಕ್ಷ ಜಿ. ವಿಜಯಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಬಸವರಾಜ್, ಗುರು ಪ್ರಸಾದ್, ಭಾಸ್ಕರ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು