ದಾವಣಗೆರೆ : ರಾಜ್ಯ ಮಾತ್ರವಲ್ಲ ದೇಶದಲ್ಲೇ ಹೆಚ್ಚು ಸದ್ದು ಮಾಡಿರುವ ಮುಡಾ ಹಗರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು 2ನೇ ದಿನವಾದ ಶನಿವಾರವೂ ದಾಳಿ ಮುಂದುವರೆಸಿ ಪರಿಶೀಲನೆ ನಡೆಸುತ್ತಿದೆ. ಇಡಿ ತನಿಖೆ ಚುರುಕು ಪಡೆದಂತೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಮತ್ತಷ್ಟು ಬಿಗಿಯಾಗಲಿದೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ಅವರನ್ನು ಇಡಿ ವಿಚಾರಣೆಗೆ ಪಡೆಯುತ್ತಾ? ಮುಖ್ಯಮಂತ್ರಿ ಹುದ್ದೆಗೆ ಸಿದ್ದು ರಾಜೀನಾಮೆ ನೀಡ್ತಾರಾ? ಈ ಕುರಿತು ಮಹತ್ವದ ಸ್ಟೋರಿ ಇಲ್ಲಿದೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 5ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮತ್ರಿ ಸಿದ್ದರಾಯ್ಯನವರ ಪತ್ನಿ ಪಾರ್ವತಿ ಹೆಸರಿಗೂ 50:50 ಅನುಪಾತದಡಿ ನಿವೇಶನ ಮಂಜೂರಾಗಿದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಇಡಿ ಅಧಿಕಾರಿಗಳು ನಡೆಸಿದ್ದು, ಶನಿವಾರವೂ ಪರಿಶೀಲನೆ ಮುಂದುವರಿದಿದೆ.
ಅಧಿಕಾರಿಗಳ ತಂಡ ಮೈಸೂಲಿನ ಜೆಎಲ್’ಬಿ ರಸ್ತೆಯಲ್ಲಿರುವ ಮುಡಾ ಕಚೇರಿಗೆ ಭೇಟಿ ನೀಡಿದ್ದು, ಪಾರ್ವತಿ ಸಿದ್ದರಾಮಯ್ಯ ಅವರಿಗೆ ನಿವೇಶನ ಹಂಚಿಕೆ ಮಾಡಿದ ಬಗ್ಗೆ ಮೂಲ ದಾಖಲಾತಿ ಕೊಡಿ ಎಂದು ಇಡಿ ಅಧಿಕಾರಿಗಳು ಮುಡಾ ಆಯುಕ್ತರ ಬಳಿ ಕೇಳಿದ್ದಾರೆ. ಅಲ್ಲದೆ, ಪಾರ್ವತಿ ಸಿದ್ದರಾಮಯ್ಯ ಬದಲಿ ನಿವೇಶನ ಕೋರಿ ಬರೆದ ಪತ್ರದಲ್ಲಿ ಕೆಲ ಪದಗಳನ್ನು ವೈಟ್ನರ್ ಹಾಕಿ ಅಳಿಸಿದ್ದು ಯಾರು? ಯಾವ ಪದಗಳನ್ನು ಅಳಿಸಲಾಗಿದೆ ಎಂದೂ ಇಡಿ ಅಧಿಕಾರಿಗಳು ಮಾಹಿತಿ ಕೋರಿದ್ದಾರೆ ಈ ಬಗ್ಗೆ ಅಧಿಕಾರಿಗಳು ದಾಖಲೆಗಳ ಹುಡುಕಾಟ ಆರಂಭಿಸಿದ್ದಾರೆ.
ಇಡಿ ದಿಢೀರ್ ದಾಳಿಗೆ ಬೆಚ್ಚಿಬಿದ್ದಿರುವ ಅಧಿಕಾರಿಗಳು, ಮುಡಾಗೆ ಇತ್ತೀಚೆಗಷ್ಟೇ ವರ್ಗಾವಣೆಗೊಂಡಿರುವುದಾಗಿ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ. ಇನ್ನು ಹಗರಣಕ್ಕೆ ಸಂಬAಧಿಸಿದAತೆ ಭೂ ಮಾಲೀಕ ದೇವರಾಜ್ ಮನೆಯಲ್ಲಿ ತಡರಾತ್ರಿವರೆಗೂ ಇಡಿ ಶೋಧ ನಡೆಸಿದೆ. ಮಧ್ಯರಾತ್ರಿ 12 ಗಂಟೆ ವರೆಗೂ ಇಡಿ ವಿಚಾರಣೆ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.
ದೇವರಾಜ್ ಕುಟುಂಬಕ್ಕೆ ಮೈಸೂರಿನ ಜಾಮೀನು ಬಂದಿದ್ದು ಹೇಗೆ? ಅದರ ಮೂಲ ಯಾವುದು? ಅದನ್ನ ಯಾವಾಗ ಮಾರಾಟ ಮಾಡಿದ್ದು? ಹೀಗೆ ನಾನಾ ವಿಚಾರಗಳ ಬಗ್ಗೆ ಹಾಗೂ ದಾಖಲೆಗಳ ಬಗ್ಗೆ ಇ.ಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆಗೆಗೆ ಕಳೆದ ಒಂದು ವರ್ಷದಿಂದ 15 ಪತ್ರಗಳನ್ನು ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು 50- 50 ಅನುಪಾತವನ್ನು ರದ್ದು ಪಡಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಜೊತೆಗೆ ತನಿಖಾ ಸಮಿತಿ ರಚಿಸಿ ಮುಡಾ ಆಯಕ್ತರ ವಿಚಾರಣೆ ಮಾಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಯಾವುದೇ ಒಂದು ಬಡಾವಣೆ ನಿರ್ಮಾಣ ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರಿಗಳು ರೈತರನ್ನು ಒಪ್ಪಿಸಿ ಭೂಸ್ವಾಧೀನ ಮಾಡಬೇಕಾಗುತ್ತದೆ. ಹೀಗೆ ಮಾಡುವ ಸಂದರ್ಭದಲ್ಲಿ ರೈತರಿಗೆ ಪರಿಹಾರ ರೂಪದಲ್ಲಿ ಭೂಮಿಯ ಮೌಲ್ಯದಷ್ಟೇ ಹಣವನ್ನು ಅಥವಾ ಲೇಔಟ್ ಮಾಡುವಾಗ ಶೇ 50ರಷ್ಟು ನಿವೇಶನಗಳನ್ನು ನೀಡಬೇಕೆಂಬ ಒಪ್ಪಂದವಾಗುತ್ತದೆ. ಇಲ್ಲವೆ ವಶಪಡಿಸಿಕೊಂಡ ಭೂಮಿಯ ಮೌಲ್ಯದಷ್ಟೇ ಭೂಮಿಯನ್ನು ಇನ್ನೊಂದು ಕಡೆ ಗುರುತು ಮಾಡಿ ನೀಡುವುದು ಪ್ರಾಧಿಕಾರದ ಹೊಣೆ. ಆದರೆ ಮೈಸೂರಿನಲ್ಲಿ ನಿರ್ಮಿಸಲ್ಪಟ್ಟ ಬಡಾವಣೆಗಳಲ್ಲಿ ಆ ರೀತಿ ಯಾವುದೇ ಮಾನದಂಡವನ್ನು ಅನುಸರಿಸಲಾಗಿಲ್ಲ ಎನ್ನುವ ಆರೋಪವಿದೆ.ಒಟ್ಟಿನಲ್ಲಿ ಮುಡಾ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ಸಿಎಂ ಸಿದ್ದು ರಾಜೀನಾಮೆ ಸಮೀಪಿಸಿದೆ ಎನ್ನಲಾಗಿದೆ.