ಶಿವಮೊಗ್ಗ : ಡೆಂಗ್ಯೂ ಜ್ವರದ ಭೀತಿ ನಡುವೆ ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದ್ದು, ರೋಗದಿಂದ ಬಳಲುತ್ತಿದ್ದಗಾಂಧಿ ನಗರದ ವೃದ್ಧ (74ವರ್ಷ) ರೊಬ್ಬರು ಮೃತಪಟ್ಟಿದ್ದಾರೆ. ಈ ನಡುವೆ ಸಾಗರದ ಯುವಕನೋರ್ವನಲ್ಲಿ ರೋಗ ಪತ್ತೆಯಾಗಿದೆ.
ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ. 21ರಂದು ಝಿಕಾ ಸೋಂಕು ಅವರಲ್ಲಿ ಪತ್ತೆಯಾಗಿತ್ತು. ಬಳಿಕ ರಾಷ್ಟ್ರೀಯ ರೋಗ ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಸಂಸ್ಥೆಗೆ ರಕ್ತದ ಮಾದರಿ ಕಳಿಸಿದ್ದು ಅಲ್ಲಿಯೂ ಝಿಕಾ ದೃಢಪಟ್ಟಿತ್ತು. ಅವರಿಗೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.
ಗುರುವಾರ ಕುಟುಂಬದವರು ಅವರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿಸಿಕೊಂಡು ಮನೆಗೆ ಕರೆದೊಯ್ದಿದ್ದರು. ಜ್ವರ ಮಾತ್ರವಲ್ಲದೆ ವಿವಿಧ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಇನ್ನೊಂದೆಡೆ ಸಾಗರದಲ್ಲಿಯು ಯುವಕನಿಗು ಝಿಕಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.