![](https://davangerevijaya.com/wp-content/uploads/2025/01/IMG-20250116-WA0145.jpg)
ಬೆಂಗಳೂರು.
ರಾಜ್ಯದಲ್ಲಿ ತೀವ್ರ ಕುತುಹೂಲ ಮೂಡಿಸಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲಿನ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಬಣಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಈ ನಡುವೆ ಸದಾ ಗೆಲುವಿನ ಓಟ ಮುಂದುವರಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಬಣ ಒಕ್ಕಲಿಗರ ಚುನಾವಣೆಯಲ್ಲಿ ಗೆಲುವು ಸಾಧಿಸಿ ತನ್ನ ಪ್ರಾಬಲ್ಯ ಮೆರೆದಿದೆ.
ಇನ್ನು ಇತ್ತೀಚೆಗೆ ನಡೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇಡೀ ರಾಜ್ಯದ ಗಮನ ಸೆಳೆದಿತ್ತು. ಜಿದ್ದಾಜಿದ್ದಿನ ಅದೇ ಅಖಾಡದಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ಒಂದು ತಿಂಗಳಿನಿAದಲೂ ರಣತಂತ್ರ ಹೆಣೆದಿದ್ದ ಡಿ.ಕೆ ಸಹೋದರರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಬಿಗ್ ಶಾಕ್ ಕೊಟ್ಟಿದ್ದರು.
![](https://davangerevijaya.com/wp-content/uploads/2025/01/IMG-20241225-WA0105.jpg)
![](https://davangerevijaya.com/wp-content/uploads/2025/01/IMG-20250116-WA0230.jpg)
ಇನ್ನು ಜೆಡಿಎಸ್ ಭದ್ರಕೋಟೆ ಅಂತಾ ಅತಿಯಾದ ಆತ್ಮವಿಶ್ವಾಸದಲ್ಲಿದ್ದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮುಖಭಂಗ ಅನುಭವಿಸಿದ್ದರು. ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಈ ನಡುವೆ ಒಕ್ಕಲಿಗರ ಚುನಾವಣೆ ಸೋಲು ಜೆಡಿಎಸ್ನ ಕುಮಾರಸ್ವಾಮಿಗೆ ಒಂದಿಷ್ಟು ಆಘಾತವಾಗಿದೆ.
ಭಾರಿ ಪೈಪೋಟಿ.
ರಾಜ್ಯ ಒಕ್ಕಲಿಗರ ಸಂಘ ಚುನಾವಣೆ ತೀವ್ರ ಕುತುಹೂಲ ಮೂಡಿಸಿದ್ದು, ಉಪ ಚುನಾವಣೆ ಬಳಿಕ ನಡೆದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆದಿತ್ತು. ಈ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಬಣದ ಡಾ.ಆಂಜಿನಪ್ಪಗೆ ಸೋಲಾಗಿದೆ. ಕೆಂಚಪ್ಪ ಗೌಡ 21 ಮತಗಳನ್ನು ಪಡೆದುಕೊಂಡಿದ್ದು, ಡಾ.ಆಂಜಿನಪ್ಪ 14 ಮತಗಳನ್ನು ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ಎಲ್ ಶ್ರೀನಿವಾಸ್ ಮತ್ತು ಡಾ. ರೇಣುಕಾಪ್ರಸಾದ್ ಕೆ.ವಿ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಸಹಾಯಕ ಕಾರ್ಯದರ್ಶಿಯಾಗಿ ಹನುಮಂತರಾಯಪ್ಪ. ಆರ್ ಮತ್ತು ಖಜಾಂಚಿಯಾಗಿ ಎನ್.ಬಾಲಕೃಷ್ಣ ಆಯ್ಕೆ ಆಗಿದ್ದಾರೆ
![](https://davangerevijaya.com/wp-content/uploads/2025/01/IMG-20250116-WA01462.jpg)