ಬೆಂಗಳೂರು.
ನಗರದ ಕಬ್ಬನ್ ಉದ್ಯಾನವನದ ಬಳಿ ಇರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ, ಆವರಣದಲ್ಲಿ ಡಿ.27 ರ ಶುಕ್ರವಾರ ಬೆಳಗ್ಗೆ 9 .ರಿಂದ 4 ರವರೆಗೆ2024-2029 (೨೦೨೪-೨೦೨೯ )ನೇ ಅವಧಿಯ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆ ನಡೆಯಲಿದೆ ಎಂದು ರಾಜ್ಯಾಧ್ಯಕ್ಷ ಷಡಕ್ಷರಿ ಹೇಳಿದರು.
ನಗರದಲ್ಲಿ ಮಂಗಳವಾರ “ಹೊಸ ಮನ್ವಂತರದತ್ತ ವಿಕಾಸಶೀಲ ಹೆಜ್ಜೆ’ ಎಂಬ ಘೋಷ ವಾಕ್ಯದೊಂದಿಗೆ 2019-2024ನೇ ಅವಧಿಯ ಪ್ರಣಾಳಿಕೆ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯೂ ರಾಜ್ಯಾಧ್ಯಕ್ಷರ ಹುದ್ದೆಗೆ ಷಡಕ್ಷರಿ ನಾನು ಒತ್ತಾಯದ ಮೇರೆಗೆ ಸ್ಪರ್ಧೆ ಮಾಡಿರುತ್ತೇನೆ. ಇನ್ನು ಈ ಬಾರಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲಾಗಿದ್ದು, ರಾಜ್ಯ ಖಜಾಂಚಿ ಸ್ಥಾನಕ್ಕೆ ಹಾಲಿ ರಾಜ್ಯ ಉಪಾಧ್ಯಕ್ಷ ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮನ್ನ ಸ್ಪರ್ಧಿಸಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು 5. 25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆ. ರಾಜ್ಯಾದ್ಯಂತ 30 ಜಿಲ್ಲಾ ಶಾಖೆಗಳು, 3 ಶೈಕ್ಷಣಿಕ ಜಿಲ್ಲೆಗಳು,186 ತಾಲ್ಲೂಕು ಶಾಖೆಗಳು ಮತ್ತು 07 ಯೋಜನಾ ಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲಾ ಶಾಖೆಗಳಲ್ಲಿ ೬೬ ಜಿಲ್ಲಾ ನಿರ್ದೇಶಕರುಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮುಖಾಂತರ ಆಯ್ಕೆ ಮಾಡಲಾಗಿದೆ.
ಅದೇ ರೀತಿ ತಾಲ್ಲೂಕು ಶಾಖೆಗಳಲ್ಲಿ 35 ನಿರ್ದೇಶಕರು, ತಾಲ್ಲೂಕು ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮುಖಾಂತರ ಆಯ್ಕೆ ಮಾಡಲಾಗಿದೆ. ರಾಜ್ಯದಲ್ಲಿ 07 ಯೋಜನಾ ಶಾಖೆಗಳಿದ್ದು, 19ನಿರ್ದೇಶಕರು, ಅಧ್ಯಕ್ಷರು, ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮುಖಾಂತರ ಆಯ್ಕೆ ಮಾಡಲಾಗಿದೆ. ಜಿಲ್ಲೆ, ತಾಲ್ಲೂಕು ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಕಾರ್ಯದರ್ಶಿಯನ್ನು ನಾಮನಿರ್ದೇಶನದ ಮೂಲಕ ನೇಮಕ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳಿಂದ 108 ರಾಜ್ಯ ಪರಿಷತ್ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆಮಾಡಲಾಗುತ್ತದೆ. ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು ಮತ್ತು ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿರುತ್ತದೆ. ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲೆ 102ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾ ಕಾರ್ಯದರ್ಶಿ ಮತ್ತು ತಾಲ್ಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿದಂತೆ ಒಟ್ಟು971 ಮತದಾರರಿದ್ದು, ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2026ರ ಅವಧಿಯ ಚುನಾವಣೆಗೆ ಸಂಬAಧಿಸಿದAತೆ ಲೋಕೋಪಯೋಗಿ ಇಲಾಖೆಯ ಕೃಷ್ಣಯ್ಯ ಎಂಬುವರು ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಿ ಚುನಾವಣೆಗೆ ತಾತ್ಕಾಲಿಕ ತಡೆಯಾಜ್ಞೆ ತಂದಿದ್ದರು. ಈ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಿ.ಪಿ. ಮಂಜೇಗೌಡ, ಶಾಂತಾರಾA, ಬಿ. ಗಂಗಾಧರ್ ಇವರುಗಳು ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರ ಮೇರೆಗೆ ಸರ್ಕಾರವು ಆಡಳಿತಾಧಿಕಾರಿಗಳನ್ನು ನೇಮಿಸಿತ್ತು.
ಆದರೆ ಎರಡೂ ಪ್ರಕರಣಗಳಿಗೆ ಸಂಬAಧಿಸಿದAತೆ ಉಚ್ಛ ನ್ಯಾಯಾಲಯವು ಪ್ರತ್ಯೇಕ ಪ್ರಕರಣಗಳಲ್ಲಿ ಚುನಾವಣೆಗೆ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ವಜಾಗೊಳಿಸಿ ಚುನಾವಣೆ ಪ್ರಕ್ರಿಯೆ ಮುಂದುವರೆಸಲು ಆದೇಶ ನೀಡಿದೆ. ಸರ್ಕಾರವು ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ್ದ ಕ್ರಮವನ್ನು ತಿರಸ್ಕರಿಸಿ ಸಂಘದ ಬೈಲಾ ನಿಯಮವನ್ನು ಎತ್ತಿ ಹಿಡಿದಿದೆ. ಚುನಾವಣೆಗೆ ಸಂಬAಧಿಸಿದAತೆ ಕೆಲವರು ದುರುದ್ದೇಶದಿಂದ ನ್ಯಾಯಾಲಯಗಳಲ್ಲಿ ದಾಖಲಿಸಿದ್ದ ಬಹುತೇಕ ಎಲ್ಲಾ ಪ್ರಕರಣಗಳು ವಜಾಗೊಂಡಿದೆ ಎಂದರು.
ನೌಕರರಿಗೆ ನೀಡಿದ್ದ ಭರವಸೆಯಂತೆ ಪ್ರಣಾಳಿಕೆಯ ಎಲ್ಲಾ ಅಂಶಗಳನ್ನು ಕಳೆದ ೦೫ ವರ್ಷಗಳಲ್ಲಿ ನಮ್ಮ ತಂಡ ಈಡೇರಿಸುವ ಮೂಲಕ ನುಡಿದಂತೆ ನಡೆದು ಯಶಸ್ವಿಯಾಗಿದ್ದೇವೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶತಮಾನೋತ್ಸವದ ಭಾಗವಾಗಿ ರಾಜ್ಯ ಸರ್ಕಾರದಿಂದ ಅಂದಾಜು 18.00 ಕೋಟಿ ಅನುದಾನ ಪಡೆದು ರಾಜ್ಯ ಸರ್ಕಾರಿ ನೌಕರರ ಸಂಘದ ಕಛೇರಿ, ಸಭಾಂಗಣ ಮತ್ತು ವಸತಿಗೃಹಗಳನ್ನು ನವೀಕರಣ ಮಾಡುವ ಮೂಲಕ ರಾಷ್ಟç ಮಟ್ಟದ ಸಂಘಟನೆಗಳಿಗೆ ಮಾದರಿಯಾಗಿದ್ದೇವೆ.ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ ರಾಜ್ಯ 7ನೇ ವೇತನ ಆಯೋಗವನ್ನು ಅವಧಿಯೊಳಗೆ ರಚಿಸಲು ಯಶಸ್ವಿಯಾಗಿದೆ.ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಡುವ ಮೂಲಕ ಶೇ. 17% ಮಧ್ಯಂತರ ಪರಿಹಾರ ಭತ್ಯೆಯನ್ನು ಪಡೆದುಕೊಳ್ಳಲಾಗಿದೆ.
ರಾಜ್ಯ 7ನೇ ವೇತನ ಆಯೋಗದ ವರದಿಯ ಶಿಫಾರಸ್ಸಿನಂತೆ ಶೇ.27.50 ರಷ್ಟು ವೇತನ ಭತ್ಯೆಗಳ ಪರಿಷ್ಕರಣೆಯ ಆರ್ಥಿಕ ಲಾಭವನ್ನು ಪಡೆಯಲಾಗಿದೆ. ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಭಾಗವಾಗಿ ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿಗಳ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದು, ಈಗಾಗಲೇ ಸಮಿತಿಯು ಎರಡು ಸಭೆಗಳನ್ನು ನಡೆಸಿದ್ದು, ಹಳೆ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಿರುವ ರಾಜ್ಯಗಳಿಂದ ವರದಿಯನ್ನು ಪಡೆಯುವ ನಿಟ್ಟಿನಲ್ಲಿ ಸಂಘವು ಯಶಸ್ವಿಯಾಗಿದೆ ಎಂದು ವಿವರಿಸಿದರು.