ಶಿವಮೊಗ್ಗ : ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಬಿಗಿ ಕ್ರಮ ಕೈಗೊಂಡ ಕಾರಣ ಫಲಿತಾಂಶದಲ್ಲಿ ಹೆಚ್ಚಳವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಬರಲು ಶಿಕ್ಷಕರು ಕಾರಣವಾಗಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಈ ಬಾರಿ ಅನೇಕ ಬದಲಾವಣೆಯಾಗಿದೆ. ಪೌಷ್ಠಿಕ ಆಹಾರ ನೀಡುತ್ತಿದ್ದೇವೆ. ಪಠ್ಯಗಳ ಬದಲಾವಣೆಯಾಗಿದೆ. ಶಿಕ್ಷಕರ ನೇಮಕಾತಿಯಾಗಿದೆ, ಇನ್ನೂ ಹೊಸ ನೇಮಕಾತಿಗಳು ಆಗಲು ಬಾಕಿ ಇದೆ. ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಕೊಟ್ಟಿದ್ದೇವೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಕಡಿಮೆ ಅಂಕಗಳಿಸಿದ ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಮತ್ತು ಅತ್ಮವಿಶ್ವಾಸ ಹೆಚ್ಚಿಸಲು ಇನ್ನೆರಡು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ ಎಂದರು.
ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬ್ಯಾಂಕ್ ನೊಂದಿಗೆ ಶಿಕ್ಷಣ ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು ಸವಾಲಾಗಿ ಸ್ವೀಕಾರ ಮಾಡಿದ್ದು, ಅನೇಕ ವರ್ಷಗಳಿಂದ ಬಳವಳಿಯಾಗಿ ಬಂದ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂದರು.
ಟ್ರೋಲಿಗರು ಉದ್ಧಾರ ಆಗಲ್ಲ
3 ವರ್ಷದಲ್ಲಿ 3 ಸಾವಿರ ಕೆ.ಪಿ.ಎಸ್. ಶಾಲೆಗಳನ್ನು ಮಾಡಿ ಮೇಲ್ದರ್ಜೆಗೆ ಏರಿಸುತ್ತೇವೆ. ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಬಡ್ತಿ ಪಡೆದಿರುವುದು ಸಂತೋಷ ತಂದಿದೆ. ಶಿಕ್ಷಣ ಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಅನೇಕರು ನನ್ನ ಬಗ್ಗೆ ಕೆಟ್ಟದಾಗಿ ಟ್ರೋಲ್ ಮಾಡುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿ ಸಮಯ ವ್ಯರ್ಥ ಮಾಡುವುದಿಲ್ಲ, ಟ್ರೋಲ್ ಮಾಡುವವರು ಜೀವನದಲ್ಲಿ ಉದ್ಧಾರವಾಗುವುದಿಲ್ಲ ಎಂದರು.
ಶೇ.20 ಗ್ರಾಮೀಣ ಕೃಪಾಂಕ ನೀಡಿದ್ದೇವೆ. ಇವೆಲ್ಲವುದರ ಪರಿಣಾಮ ಉತ್ತಮ ಫಲಿತಾಂಶ ಬಂದಿದೆ. ಪರೀಕ್ಷೆಯನ್ನು ಬಿಗಿಯಾಗಿ ಪಾರದರ್ಶಕವಾಗಿ ನಡೆಸಿದ್ದರಿಂದ ರಾಜ್ಯದಲ್ಲಿ 75 ಶಾಲೆಗಳು ಶೂನ್ಯ ಫಲಿತಾಂಶ ಬಂದಿದ್ದರೂ ಸಹ, ಇನ್ನೆರಡು ಅವಕಾಶ ಕಲ್ಪಿಸಿದ್ದೇವೆ. ಈಗ ಬಿಗಿ ಮಾಡಿದ್ದರ ಪರಿಣಾಮ ಮುಂದಿನ ಉನ್ನತ ಶಿಕ್ಷಣಕ್ಕೆ ಅವರ ಭವಿಷ್ಯ ಉಚ್ಚಾಲದಾಗಲಿದೆ. ಅನೇಕ ಪೆÇೀಷಕರು ಪರೀಕ್ಷೆಗಳ ಗುಣಮಟ್ಟದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹಾಗಾಗಿ ಈ ಬಾರಿ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
ಶಿವಮೊಗ್ಗದಲ್ಲಿ ಗ್ಯಾಂಗ್‍ವಾರ್‍ಗೆ ಬಲಿಯಾಗಿದೆ. ಸ್ಥಳೀಯ ಶಾಸಕರು ಪೆÇಲೀಸ್ ವೈಫಲ್ಯ ಎಂದು ದೂರಿರುವ ಶಾಸಕರ ಬಗ್ಗೆ ಹೆಚ್ಚಾಗಿ ಏನು ಹೇಳುವುದಿಲ್ಲ, ಆದರೆ, ಪೆÇಲೀಸರಿಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದೇನೆ. ಈಗಾಗಲೇ ಸೂಕ್ಷ್ಮಕ್ರಮಕೈಗೊಂಡಿದ್ದಾರೆ. 19 ಜನರ ಬಂಧನವಾಗಿದೆ. ಹಾಗೇನಾದರೂ ವೈಫಲ್ಯಗಳಿದ್ದಲ್ಲಿ ಅಥವಾ ಇಲಾಖೆಗೆ ಮೊದಲೇ ಸುಳಿವು ಗೊತ್ತಿದ್ದು, ಕ್ರಮ ಕೈಗೊಂಡಿಲ್ಲವಾಗಿದ್ದರೆ ಸಂತರ ಮೇಲೆ ನಿರ್ಧಾಕ್ಷಣ್ಯ ಕ್ರಮಕೈಗೊಳ್ಳುತ್ತೇನೆ.
ಮತ್ತೋಮ್ಮೆ ಪರೀಕ್ಷೆ ಬರೆಯಿರಿ
ಗ್ರಾಮೀಣ ಕೃಪಾಂಕ ಕೊಟ್ಟಿದ್ದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ ಗ್ರಾಮೀಣ ವಿದ್ಯಾರ್ಥಿಗಳ ಸಮಸ್ಯೆ ಗೊತ್ತಿದ್ದ ಕಾರಣ ಮೂರು ಬಾರಿ ಪರೀಕ್ಷೆ ನಡೆಸಲಾಗಿದೆ.
ಯಾರು 20% ಗ್ರೇನಲ್ಲಿ ಪಾಸ್ ಆದವರು ಮತ್ತೊಮ್ನೆ ಪರೀಜ್ಷೆ ಬರೆಯಿರಿ. ಪರೀಕ್ಷೆಗೆ ಮುಂಜಾಗ್ರತೆ ಪಡೆಯುವ ಜೊತೆಗೆ ದಡ ಸೇರಿಸುವ ಪ್ರಯತ್ನ ಮಾಡಲಾಗಿದೆ. ಈ ರೀತಿಯ ಪರೀಕ್ಷೆ ನಡೆಸಲು ಹಲವರು ನಮ್ಮನ್ನು ಕೇಳಿದ್ದಾರೆ. ಇನ್ನು ಮಳೆಗಾಲ ಬಂದಿದ್ದು, ಸರಕಾರಿ ಶಾಲೆಗಳ ರಿಪೇರಿಗೆ ಹಣ ತೆಗೆದಿಡಲಾಗಿದೆ. ಕಡಿಮೆ ಹಣ ಬಂದರೂ ಶಾಲೆಗಳನ್ನು ರಿಪೇರಿ ಮಾಡಲು ಪ್ರಯತ್ನ ಮಾಡುತ್ತೇವೆ. ಕಳೆದ ಬಾರಿ ಹಣ ಬಾರದೇ ಹೋದರೂ 800
3000 ಕರ್ನಾಟಕ ಪಬ್ಲಿಕ್ ಶಾಲೆ
ಈ ಬಾರಿ 3000 ಕರ್ನಾಟಕ ಪಬ್ಲಿಕ್ ಶಾಲೆಯನ್ನು ರಾಜ್ಯದಲ್ಲಿ ತೆರೆಯಬೇಕೆಂಬ ನಿರ್ಧಾರ ಮಾಡಲಾಗಿದೆ. ಪಬ್ಲಿಕ್‍ಶಾಲೆ ತೆರೆದರೆ ಮಕ್ಕಳು ಈ ಶಾಲೆಗೆ ತಾ ಮುಂದು ನಾ ಮುಂದು ಎಂದು ಬರುತ್ತಾರೆ. ಆಗ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳು ಕಡಿಮೆಯಾಗುತ್ತದೆ. ಇನ್ನು ಕಳೆದ ಬಾರಿ 800 ಶಾಲೆ ಕೊಠಡಿ ಶಾಲೆ ರಿಪೇರಿಗೆ ಬಂದಿದ್ದು ಅದರ ಹಣವನ್ನ ಈಗ ತೀರಿಸಕಾಗುತ್ತಿದೆ. ಈ ಬಾರಿ ಸೋರಿಕೆ ಶಾಲೆಗಳನ್ನ ಕೈಗೆತ್ತಿಕೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಅರ್ಬನ್ ಡೆವೆಲಪ್ ಮೆಂಟ್ ನಿಂದ 25% ಅನುದಾನ ಶಿಕ್ಷಣ ಇಲಾಖೆಗೆ ಬರಲಿದೆ ಎಂದರು.