ಶಿವಮೊಗ್ಗ:

ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೇ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಿಕಾರಿಪುರ ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.

ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೇಣುಕಾ (40) ಕೊಲೆಯಾದ ಮಹಿಳೆ. ಪತಿ ನಾಗರಾಜ್ (45) ಪತ್ನಿ ರೇಣುಕಾನನ್ನು ಕೊಲೆ ಮಾಡಿದ್ದಾನೆ. ಶಿಕಾರಿಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕೌಟುಂಬಿಕ ಕಲಹದ ಕಾರಣಕ್ಕೆ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share.
Leave A Reply

Exit mobile version