ದಾವಣಗೆರೆ : ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಕೊಂಡಿದ್ದಾರೆ. ಪ್ರತಾಪ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಘಟನೆ ನಡೆದಿದ್ದು, ಮ್ಯಾಕ್ಸ್ ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿದ್ದಾರೆ. ದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.