
ದಾವಣಗೆರೆ: ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಎಸ್ ಒ ಜಿ ಕಾಲೋನಿಯಲ್ಲಿ ಸಂಭವಿಸಿದೆ.
ಲಲತಮ್ಮ,(50), ಮಲ್ಲೇಶಪ್ಪ(60), ಪಾರ್ವತಮ್ಮ(45), ಸೌಭಾಗ್ಯ (36), ಪ್ರವೀಣ್(35) ಗಾಯಗೊಂಡವರು. ಗಾಯಾಳುಗಳಲ್ಲಿ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.
ಅಡುಗೆ ಮಾಡುವಾಗ ಸಿಲಿಂಡರ್ ಸೋರಿಕೆಯಾಗಿ ಬ್ಲಾಸ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಗಾಯಾಳುಗಳನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಶೇ.50 ರಿಂದ 60 ನಷ್ಟು ಸುಟ್ಟ ಹಿನ್ನಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾ ನಗರದ ಪೊಲೀಸ್ ಠಾಣಾ ವ್ಯಾಪ್ತಿ ಈ ಘಟನೆ ಸಂಭವಿಸಿದೆ.

