ದಾವಣಗೆರೆ : ಅಕ್ರಮ ಗಣಿಗಾರಿಕೆ ಪ್ರಕರಣ ಸಂಬAಧ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ವೇಳೆ ಬಳ್ಳಾರಿ ಜಿಲ್ಲಾ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವು ಮಾಡಿದೆ. ಇದರಿಂದ ಯಾವುದೇ ಪೂರ್ವಾನುಮತಿ ಇಲ್ಲದೇ ಅವರು ಬಳ್ಳಾರಿ ಜಿಲ್ಲೆ ಪ್ರವೇಶಿಸಬಹುದಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆ ಮೇಲೆ ಜನಾರ್ಧನರೆಡ್ಡಿ ಪ್ರಭಾವ ಬೀರಲಿದ್ದಾರೆ. ಹಾಗಾದ್ರೆ ಸಂಡೂರು ಚಿತ್ರಣ ಬದಲಾಗುತ್ತಾ? ಬಿಜೆಪಿಗೆ ಹೊಸಚೈತನ್ಯ ಬಂತಾ? ಈ ಕುರಿತು ಇಲ್ಲಿದೆ ಸ್ಡೋರಿ
ಹಲವು ವರ್ಷಗಳ ಕಾಲ ಜೈಲುಹಕ್ಕಿಯಾಗಿದ್ದ ಜನಾರ್ಧನರೆಡ್ಡಿ ಆಮೇಲೆ ಷರತ್ತಿನ ಮೇಲೆ ಜಾಮೀನು ಪಡೆದು ಹೊರಬಂದಿದ್ದಾರೆ. ಅಲ್ಲದೆ ಬಳ್ಳಾರಿ ಜಿಲ್ಲೆಗೆ ಪ್ರವೇಶ ನಿರ್ಭಂದಿಸಲಾಗಿತ್ತು. ಈಗ ವಾತಾವರಣ ಬಂದಲಾಗಿದೆ. ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಎಂಎ ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜನಾರ್ದನರೆಡ್ಡಿ ಬಿಡುಗಡೆಯಾದ ಬಳಿಕ ಅವರಿಗೆ ಬಳ್ಳಾರಿ, ಕರ್ನೂಲು ಹಾಗೂ ಅನಂತಪುರ ಜಿಲ್ಲೆ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.
ಇದೀಗ ಆಂಧ್ರ ಪ್ರದೇಶದ ಅನಂತಪುರ, ಕರ್ನೂಲು ಹಾಗೂ ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 2011ರ ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು.
ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷ್ಯಗಳ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ ಮನವಿ ಮಾಡಿತ್ತು. ಆ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
2021ರ ನವೆಂಬರ್ ನಲ್ಲಿ ಕೊನೆಯದಾಗಿ ಬಳ್ಳಾರಿಗೆ ಜನಾರ್ದನ ರೆಡ್ಡಿ ಬಳ್ಳಾರಿಗೆ ಆಗಮಿಸಿದ್ದರು.
2011ರ ಸೆ.5ರಂದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಮೂರು ವರ್ಷ ನಾಲ್ಕು ತಿಂಗಳು ಜೈಲಿನಲ್ಲಿದ್ದರು. ಜೈಲುವಾಸದ ಬಳಿಕ 2015 ರಲ್ಲಿ ಬಿಡುಗಡೆಯಾಗಿದ್ದರು. ಬಳ್ಳಾರಿ ಜಿಲ್ಲೆಯಿಂದ ದೂರವೇ ಇದ್ದ ಜನಾರ್ದನ ರೆಡ್ಡಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಬಳಿಕ ಕೆಕೆಆರ್ಪಿ ಪಕ್ಷವನ್ನು ಬಿಜೆಪಿಯೊಳಗೆ ವಿಲೀನ ಮಾಡಿದ್ದರು.
ಜನಾರ್ಧನರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಅವಕಾಶ ನೀಡಿದ್ದು ಬಿಜೆಪಿಗೆ ನೂರುಆನೆ ಬಲ ಬಂದಂತಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆ ಆಗಿದ್ದ ಬಳ್ಳಾರಿಯನ್ನು ಚಿದ್ರಮಾಡಿ ಕಮಲ ಅರಳಿಸಿದ್ದು ಇದೇ ಜನಾರ್ಧನರೆಡ್ಡಿ. ಸಂಡೂರು ಶಾಸಕ ಈ.ತುಕಾರಾಮ್ ಬಳ್ಳಾರಿ ಲೋಕಸಭೆಗೆ ಸ್ಪಂದಿಸಿ ಕಾಂಗ್ರೆಸ್ನಿಂದ ಗೆದ್ದಿದ್ದರು. ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಸದ್ಯ ಸಂಡೂರು ವಿಧಾನಸಭೆಗೆ ಉಪಚುನಾವಣೆ ನಡೆಯಲಿದ್ದು, ರೆಡ್ಡಿ ಬಳ್ಳಾರಿ ಎಂಟ್ರಿ ಕೊಡುತ್ತಿರುವುದು ಅಲ್ಲಿನ ಚಿತ್ರಣ ಬದಲಾಗುವ ಸಾಧ್ಯತೆಯಿದೆ.
ರೆಡ್ಡಿ ಗೆಳೆಯ ಬಿ.ಶ್ರೀರಾಮುಲು ಮೂಲೆಗುಂಪಾಗಿದ್ದು ಅವರನ್ನು ಮತ್ತೆ ಮುನ್ನೆಲೆಗೆ ತರಲು ರೆಡ್ಡಿ ಮುಂದಾಗುವ ಸಾಧ್ಯತೆಯಿದೆ. ಸಂಡೂರು ಉಪಚುನಾವಣೆಯಲ್ಲಿ ಶ್ರೀರಾಮುಲುಗೆ ಬಿಜೆಪಿ ಟಿಕೆಟ್ ಕೊಡಿಸಿ ಗೆಲ್ಲಿಸಿಕೊಂಡು ಬರುವ ಪ್ಲಾನ್ಹಾಕಿದ್ದಾರೆ. ಕಾಂಗ್ರೆಸ್ ಕ್ಷೇತ್ರವನ್ನು ಬಿಜೆಪಿಗೆ ತೆಕ್ಕೆಗೆ ತೆಗೆದುಕೊಳ್ಳಲು ಕಮಲ ನಾಯಕರಿಗೆ ರೆಡ್ಡಿಯೇ ಸೂಕ್ತ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.ಒಟ್ಟಾರೆ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡಿದ್ದು ಬಿಜೆಪಿಗೆ ಆನೆಬಲ ಬಂದಂತಾಗಿದೆ.