ಶಿವಮೊಗ್ಗ: ಗ್ಯಾರೆಂಟಿ ಕಾಂಗ್ರೆಸ್ ಸರ್ಕಾರ ಯಶಸ್ವಿ ಒಂದು ವರ್ಷ ಪೂರೈಸಿದ ಸಂಭ್ರಮ ಹಿನ್ನಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಕಾಶಿ ವಿಶ್ವನಾಥ ದೇವಾಲಯದಲ್ಲಿ ರುದ್ರಾಭಿಷೇಕ ವಿಶೇಷ ಪೂಜೆ ನೆರವೇರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸುಸಂದರ್ಭದಲ್ಲಿ ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.
ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆದು ಪಾರದರ್ಶಕವಾದ ಆಡಳಿತವನ್ನು ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರ ನೇತೃತ್ವದಲ್ಲಿ ಗ್ಯಾರಂಟಿ ಸರ್ಕಾರ ನಾಲ್ಕು ವರ್ಷಗಳ ಕಾಲ ಸುಭದ್ರವಾಗಿ ಈ ರಾಜ್ಯದ ಜನರ ಸೇವೆ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು
ಈ ಸಂದರ್ಭದಲ್ಲಿ ಯುವ ಮುಖಂಡ ಕೆ. ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್. ಕುಮಾರೇಶ್, ಪ್ರಮುಖರಾದ ಕೆ.ಎಲ್. ಪವನ್, ಗುರುಪ್ರಸಾದ್, ಧರ್ಮ ಬೊಮ್ಮನಕಟ್ಟೆ, ವಸಂತ, ಸುಹಾಸ್ ಗೌಡ, ರಾಹುಲ್ ಸಿಗೆಹಟ್ಟಿ, ರಾಜೇಶ್ ಮಂದಾರ, ವಿನಯ್, ಕಾರ್ತಿಕ್ ,ಪ್ರಶಾಂತ್, ಜ್ಞಾನ ಶೇಖರ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.