
ಶಿವಮೊಗ್ಗ: ಜಿಲ್ಲಾ ಯುವ ಜನತಾ ದಳ(ಜಾ) ಪಕ್ಷದ ವತಿಯಿಂದ ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾ ಅಧ್ಯಕ್ಷ ಕಡಿದಾಳ್ ಗೋಪಾಲಗೌಡ ಅವರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಜನತಾ ದಳದ ಜಿಲ್ಲಾಧ್ಯಕ್ಷ ಮಧು ಕುಮಾರ್, ಕಾರ್ಯಾಧ್ಯಕ್ಷ ಎಸ್ ಎಲ್. ನಿಖಿಲ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ಪ್ರಧಾನ ಕಾರ್ಯದರ್ಶಿ ಸಂಗಯ್ಯ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷರಾದ ಮಹಮ್ಮದ್ ಯೂಸುಫ್, ಪ್ರಚಾರ ಸಮಿತಿಯ ಅಧ್ಯಕ್ಷ ಸಿದ್ದಪ್ಪ, ಜಿಲ್ಲಾ ವಕ್ತಾರ ನರಸಿಂಹ, ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ನಗರಧ್ಯಕ್ಷರಾದ ದೀಪಕ್ ಸಿಂಗ್, ನಗರ ಮಹಾ ಪ್ರಧಾನ ಕಾರ್ಯದರ್ಶಿ ವಿನಯ್, ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್, ಗೋಪಿ, ಲೋಹಿತ್ ಮತ್ತು ಮಾಧವ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
(ಫೋಟೋ ಇದೆ)