ಶಿವಮೊಗ್ಗ : ಡಿಸಿಸಿ ಬ್ಯಾಂಕ್ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ಇತರೆ ಕ್ಷೇತ್ರದಿಂದ ಶಿಮುಲ್ ನಿರ್ದೇಶಕ, ಮಾಜಿ ಅಧ್ಯಕ್ಷ ಇಂದು ಶಿವಶಂಕರ್ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ನಾಲ್ಕು ಸೆಟ್ ನಾಮ ಪತ್ರಸಲ್ಲಿಸಿದ್ದೇನೆ. ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ನಾಮ ಪತ್ರ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಅವರ ಏಳ್ಗೆಗಾಗಿ ದುಡಿಯಲಿದ್ದು, ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ. ಸುಮಾರು ೧೫ ವರ್ಷಗಳ ಕಾಲ ಶಿಮುಲ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅನುಭವವಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕನಾಗುತ್ತೇನೆ ಎಂಬ ನಂಬಿಕೆ ಇದೆ ಎಂದರು.