
ಹೊಳಲ್ಕೆರೆ (ಚಿತ್ರದುರ್ಗ) : ಸ್ಥಳೀಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಎಂಟು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದ ಹಣ ಸಾಗಾಟ ಮಾಡುತ್ತಿರುವ ಬಗ್ಗೆ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಅವರಿಗೆ ಮಾಹಿತಿ ಹೋಗಿದೆ. ಈ ಸಂಬಂಧ ಖಚಿತ ಮಾಹಿತಿ ಪಡೆದ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಅವರ ಆದೇಶದ ಮೇರೆಗೆ ಹೊಳಲ್ಕೆರೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವಾಹನವು, , ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು.
ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎಂಟು ಕೋಟಿ ಹಣದ ಜೊತೆ ಚಾಲಕ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳಲ್ಕೆರೆ ಹೊರವಲಯದ ದುಮ್ಮಿ ಗ್ರಾಮದ ಬಳಿ ಇನ್ನೋವಾ ಕಾರನ್ನು ತಡೆದ ಪೊಲೀಸರು , ಚಾಲಕ ಸಚಿನ್ ಎಂಬಾತನ ಜೊತೆ ಕಾರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ಸಹ ದಾಖಲಾಗಿದೆ.

ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ ಸಹ ಈಗಾಗಲೇ ಹೊಳಲ್ಕೆರೆ ಠಾಣೆಗೆ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಅಲ್ಕದೇ ಹಣ ಯಾರದ್ದು ಹಾಗೂ ಏಕೆ ಸಾಗಾಟ ಮಾಡುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ತಿಳಿಯಬೇಕಿದೆ.