
ದಾವಣಗೆರೆ : ಮಾಜಿ ಶಾಸಕ ಎಂಪಿ ರೇಣುಕಾಚಾರ್ಯರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಬಂದಿದ್ದು ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇನ್ನು ರೇಣುಕಾಚಾರ್ಯರಿಗೆ ಎರಡು ದೂರವಾಣಿ ಸಂಖ್ಯೆಯಿಂದ ಕರೆ ಬಂದಿದೆ. ದೂರವಾಣಿ ಮೂಲಕ ಕೊಲೆ ಬೆದರಿಕೆ ಹಾಕಿದ ದುರುಳರು ನಿನಗೂ ನಿನ್ನ ಮಗನಿಗೂ ರಾತ್ರಿ ಒಳಗೆ ಮುಗಿಸ್ತೀವಿ ಎಂದು ಬೆದರಿಕೆ ಹಾಕಿದ್ದಾರೆ. ಈ ವಿಷಯವನ್ನು ಸ್ವತಃ ಮಾಜಿ ಶಾಸಕ ರೇಣುಕಾಚಾರ್ಯ ಮಾಧ್ಯಮಗಳಿಗೆ ತಿಳಿಸಿದ್ದು, ಪೊಲೀಸರ ರಕ್ಷಣೆ ಕೋರಿದ್ದಾರೆ.

