ಮಂಡ್ಯ.
ಮಂಡ್ಯದಲ್ಲಿ ಇತ್ತೀಚಿಗೆ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳಾ ಸಬಲೀಕರಣದ ಸಾಧನೆಗಾಗಿ ದಾವಣಗೆರೆ ಜಿಲ್ಲೆ ಜಗಳೂರಿನ ಕೆನರಾ ಬ್ಯಾಂಕ್ ನಿವೃತ್ತ ವಿಭಾಗೀಯ ವ್ಯವಸ್ಥಾಪಕರಾದ ಎನ್.ಟಿ . ಎರ್ರಿ ಸ್ವಾಮಿಯವರನ್ನು ಸನ್ಮಾನಿಸಲಾಯಿತು .
ಸುಪ್ರೀಂ ಕೋರ್ಟ್ನ ವಿಶ್ರಾಂತ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶಿವರಾಜ ವಿ ಪಾಟೀಲ್ ರವರು ಸನ್ಮಾನವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಾಧಾರ ಚೆನ್ನಯ್ಯ ಗುರು ಪೀಠದ ಪರಮಪೂಜ್ಯ ಶ್ರೀ ಶ್ರೀ ಬಸವ ಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀರಂಗಪಟ್ಟಣದ ಶ್ರೀ ಕ್ಷೇತ್ರ ಬೇಬಿ ಮಠದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ,ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನಾಡೋಜ ಮಹೇಶ ಜೋಶಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಚೆಲುವರಾಯ ಸ್ವಾಮಿ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರುv