ದಾವಣಗೆರೆ : BJPಗೆ ಈ ಸಲ ದೇಶದಲ್ಲಿ ಇಷ್ಟು ಕಡಿಮೆ ಸೀಟಾ..? 400 ಸೀಟು ಗೆದ್ದೇ ಗೆಲ್ತೀವಿ ಅಂತಿದ್ದ ಬಿಜೆಪಿಗರ ಆತ್ಮ ವಿಶ್ವಾಸಕ್ಕೆ ಭಾರೀ ಪೆಟ್ಟು ಬಿದ್ದಿದ್ಯಾ..? ಪ್ರಜ್ವಲ್ ಪೆನ್​ಡ್ರೈವ್ ಪ್ರಕರಣ ಮತ್ತು ಗ್ಯಾರಂಟಿ ಬ್ರಹ್ಮಾಸ್ತ್ರಗಳ ದಾಳಿಗೆ ಕರ್ನಾಟಕದಲ್ಲಿ ಬಿಜೆಪಿ ಈ ಸಲ ಸಿಂಗಲ್ ಡಿಜಿಟ್​ ದಾಟಲ್ವಾ.? ಏನಿದು ‘ಕೈ’ ನಾಯಕರ ಅಚ್ಚರಿ ಭವಿಷ್ಯ ಅಂದ್ರಾ..?

2 ಸಲ ಗೆದ್ದಾಗಿದೆ. ಈಗ ಮೂರನೇ ಸಲವೂ ಗೆದ್ದು ಕೇಂದ್ರದಲ್ಲಿ ಗದ್ದುಗೆ ಹಿಡಿಯಬೇಕು ಅಂತೇಳಿ ಪಣ ತೊಟ್ಟಿರೋ ಬಿಜೆಪಿಗೆ ಈ ಸಲ ಅತಿ ದೊಡ್ಡ ಶಾಕ್ ಕಾದಿದೆಯಾ.? 400 ಸೀಟು ಗೆಲ್ಲಬೇಕಾದ ಜಾಗದಲ್ಲಿ ಬಿಜೆಪಿ ಈ ಸಲ 200 ಸೀಟು ಗೆಲ್ಲೋದು ಕೂಡ ಅನುಮಾನ.. ಹೀಗಂಥ ನಾವು ಹೇಳ್ತಾಯಿಲ್ಲ. ಸಿಎಂ ಸಿದ್ರಾಮಯ್ಯ ಹೇಳಿದ್ದಾರೆ. ಹೌದು ವೀಕ್ಷಕರೇ, ಈ ಸಲದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ RSS ಹೇಳುತ್ತಿವೆ. ಆದ್ರೆ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಅಂತೇಳಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಅಂತೇಳಿ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನ ಬಿಜೆಪಿ ಕರ್ನಾಟಕದಲ್ಲಿ ಈ ಸಲ ಗೆಲ್ಲಬಹುದಾದ ಸೀಟುಗಳ ಸಂಖ್ಯೆಯ ಬಗ್ಗೆ ರಿಯಾಕ್ಟ್ ಮಾಡಿರೋ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸಿಂಗಲ್ ಡಿಜಿಟ್ ದಾಟುವುದಿಲ್ಲ. ಕಾಂಗ್ರೆಸ್​​ಗೆ ನಿರೀಕ್ಷೆ ಮೀರಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗ್ತಿದೆ. ಇದು ಸತ್ಯ ಹಾಗೂ ಸುಳ್ಳಿನ ನಡುವಿನ ಹೋರಾಟದ ಚುನಾವಣೆಯಾಗಿದೆ. ಪ್ರಧಾನಿ ಮೋದಿಯವರು ಚುನಾವಣೆಯಲ್ಲಿ ಸುಳ್ಳಿನ ಆಶ್ರಯ ಪಡೆದಿದ್ದಾರೆ ಅಂತೇಳಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು. ರಾಜ್ಯದಿಂದ ಆಯ್ಕೆಯಾಗಿದ್ದ ಬಹುತೇಕ ಬಿಜೆಪಿ ಸಂಸದರು ಕರ್ನಾಟಕವನ್ನ ಮರೆತಿದ್ದಾರೆ. ಅದರಲ್ಲೂ ಪ್ರಲ್ಹಾದ್ ಜೋಶಿಯವರು ಕೇಂದ್ರದಲ್ಲಿ ಸಚಿವರಾದ ಮೇಲೆ ಸಂಪೂರ್ಣವಾಗಿ ಕರ್ನಾಟಕವನ್ನ ಮರೆತಿದ್ದಾರೆ. ರಾಜ್ಯದ ಪರ ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಅಂತೇಳಿ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಇವರಿಗೆ ರಾಜಕೀಯ ಅಧಿಕಾರಕ್ಕೆ ಮಾತ್ರ ಕರ್ನಾಟಕ ಬೇಕು. ಗೆದ್ದಮೇಲೆ ಕೇಂದ್ರದಲ್ಲಿ ಮನಬಂದಂತೆ ವರ್ತಿಸುವ ಅಹಂ ನಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಕರ್ನಾಟಕಕ್ಕೆ ಜೋಶಿಯವರ ಕೊಡುಗೆ ಏನು. ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಒಂದು ಬಾರಿಯಾದರು ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿದ್ದಾರೆಯೇ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ‌. ಕೇಂದ್ರಕ್ಕೆ ಹೋದಮೇಲೆ ಅಹಂಕಾರದಲ್ಲಿ ಮೇರೆಯುವ ಬಿಜೆಪಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲು ನಿಶ್ಚಯಿಸಿದ್ದಾರೆ ಅಂತೇಳಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲ, ಕಳೆದ 10 ವರ್ಷದಲ್ಲಿ ತಾವು ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಚುನಾವಣೆಯಲ್ಲಿ ಚರ್ಚೆ ಮಾಡಲಿಲ್ಲ. ಬದಲಿಗೆ ಸಮಾಜದಲ್ಲಿ ದ್ವೇಷ ಬಿತ್ತುವಂತಹ, ಸಮಾಜವನ್ನ ಒಡೆಯುವಂತಹ ಮಾತುಗಳನ್ನ ಆಡಿದ್ದಾರೆ. ಜನರಿಗೆ ಇವರ ಮೋಸದ ಮಾತುಗಳ ಅರಿವಾಗಿದೆ. ಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನ ನೀಡಿರುವ ಕಾಂಗ್ರೆಸ್​​ಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಲಿದೆ ಅಂತೇಳಿ ಸಚಿವ ದಿನೇಶ್ ಗುಂಡೂರಾವ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾಗಾದ್ರೆ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದಂತೆ ಈ ಸಲದ ಎಂಪಿ ಎಲೆಕ್ಷನ್​​ನಲ್ಲಿ ರಾಜ್ಯದಲ್ಲಿ ಬಿಜೆಪಿ ಸಿಂಗಲ್ ಡಿಜಿಟ್ ದಾಟಲ್ವಾ..? ದೇಶದಲ್ಲಿ ಬಿಜೆಪಿ 200ರ ಗಡಿ ದಾಟಲ್ವಾ..?

Share.
Leave A Reply

Exit mobile version