ದಾವಣಗೆರೆ : ರೈತರು ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದೇ ಹೋದರೆ ಸರಕಾರದ ಯಾವುದೇ ಸೌಲಭ್ಯಗಳು ದೊರಕುವುದಿಲ್ಲ.
ವಿಲೇಜ್ ಅಕೌಂಟ್ ಗಳು ಈ ಕೆಲಸ ಮಾಡಬೇಕಿದ್ದು, ಪ್ರತಿ ಹಳ್ಳಿಗೆ ಹೋಗಿ ರೈತರ ಪಹಣಿಗೆ ಆಧಾರ್ ಲಿಂಕ್ ಮಾಡಿಸಬೇಕು. ಅದಕ್ಕಾಗಿಯೇ ಸರ್ಕಾರ ಹೊಸದಾದ ತಂತ್ರಾಂಶವನ್ನು ಸಿದ್ಧಗೊಳಿಸಿದೆ. ಈ ಕುರಿತು ಗ್ರಾಮ ಆಡಳಿತ ಅಧಿಕಾರಿಗಳು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಈ ಕಡ್ಡಾಯವಾದ ಕಾರ್ಯವನ್ನು ಮಾಡಲು ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿದೆ.
ಅಗತ್ಯ ದಾಖಲೆಗಳು :ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆಯಲು, ಬ್ಯಾಂಕ್ ಸೌಲಭ್ಯಗಳನ್ನು ಪಡೆಯಲು ಮತ್ತು ಕೃಷಿ ಇಲಾಖೆ ಸೌಲಭ್ಯಗಳನ್ನು ಪಡೆಯಲು ಮತ್ತು ಬೆಳೆ ಪರಿಹಾರ ಪಡೆಯಲು ಜಮೀನಿನ ಉತಾರಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಜಮೀನಿನ ಉತಾರ ಮತ್ತು ಆಧಾರ್ ಕಾರ್ಡ್ ತೆಗೆದುಕೊಂಡು ಗ್ರಾಮದ ಗ್ರಾಮ ಒನ್ ಕೇಂದ್ರ, ಆನ್ಲೈನ್ ಕೇಂದ್ರ ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಬೇಕೆಂದು ತಿಳಿಸಲಾಗಿದೆ.
7 ವರ್ಷದ ಹಿಂದೆಯೇ ಕರ್ನಾಟಕ ಸರ್ಕಾರ ಆರ್ಟಿಸಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವ ಕಾರ್ಯವನ್ನು ಆರಂಭಿಸಿತ್ತು. ಕೆಲವು ರೈತರು ಆಧಾರ ಲಿಂಕ್ ಮಾಡಿದ್ದರು. ಆದರೆ ಈಗ ಸರ್ಕಾರದ ಸೌಲಭ್ಯಗಳು ಬೇಕು ಎಂದರೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಸರ್ಕಾರ ಹೇಳಿದ್ದು, ರೈತರು ಸರ್ಕಾರಿ ಸೌಲಭ್ಯ ಪಡೆದುಕೊಳ್ಳುವಲ್ಲಿ ವಿಫಲವಾಗುತ್ತಾರೆ.ಹೆಚ್ಚಿನ ಸಂಖ್ಯೆಯ ಹಕ್ಕುಗಳು, ಗೇಣಿದಾರರು ಮತ್ತು ಬೆಳೆಗಳ ಮಾಹಿತಿ ಮೃತ ರೈತರ ಹೆಸರಿನಲ್ಲಿ ಇನ್ನೂ ಇವೆ.
ಸರ್ಕಾರದ ಯೋಜನೆಗಳ ಸಹಾಯವನ್ನು ಪಡೆಯಲು, ಶಾಶ್ವತ ಪರಿಹಾರದ ಅಂಗವಾಗಿ ಆರ್ಟಿಸಿ, ಆಧಾರ್ ಲಿಂಕ್ ಮಾಡಲು ಸೂಚನೆ ನೀಡಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭೂ ಮಾಲೀಕರು, ರೈತರ ಮನಗೆ ಆಗಮಿಸಿದ ಸಂದರ್ಭದಲ್ಲಿ ಎಲ್ಲಾ ಆರ್ಟಿಸಿಗಳನ್ನು ಆಧಾರ್ ಕಾರ್ಡ್ ಜೊತೆ ಲಿಂಕ್ ಮಾಡುವ ಪ್ರಕ್ರಿಯೆಗೆ ರೈತರು ಸಹಕಾರ ನೀಡಬೇಕು” ಎಂದು ಸಚಿವರು ಮನವಿ ಮಾಡಿದ್ದಾರೆ.
RTC aadhar card link ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?
ರೈತರು ತಮ್ಮ ಬಳಿಯಿರುವ ಮೊಬೈಲ್ ನಿಂದಲೇ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು https://landrecords.karnataka.gov.in/service4 ಇದನ್ನು ಕ್ಲಿಕ್ ಮಾಡಬೇಕು. ನಂತರ ನೀವು ನಿಮ್ಮ ಆಧಾರ್ ಕಾರ್ಡ್ ಗೆ ಜೋಡಣೆ ಆಗಿರುವ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಬಳಿಯಿರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ. ಆಗ ನೀವು ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ಬರೆದು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಭೂಮಿ ಸಿಟಿಜನಟ್ ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ನಿಮಗೆ RTC aadhar card link ಮಾಡಲು ನೀವು ಬಯಸುತ್ತೀರಾ ಎಂಬ ಸಂದೇಶ ಕಾಣಿಸುತ್ತದೆ. ಆಗ ನೀವು ಅಲ್ಲಿ ಯಸ್ ಎಂದು ನಮೂದಿಸಬೇಕು.ನಂತರ ನಿಮ್ಮ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ. ಹಾಗೂ ಆಗಲೇ ನಿಮ್ಮ ಮೊಬೈಲಿಗೆ ಆಧಾರ್ ಪಹಣಿ ಲಿಂಕ್ ಆಗಿದೆ ಎಂಬ ಸಂದೇಶವೂ ನಿಮಗೆ ಕಾಣಿಸುತ್ತದೆ. ಒಂದು ವೇಳೆ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದೇ ಹೋದಲ್ಲಿ ಸರಕಾರದ ಯಾವುದೇ ಸೌಲಭ್ಯ ಸಿಗೋದಿಲ್ಲ, ತಪ್ಪದೇ ಆಧಾರ್ ಲಿಂಕ್ ಮಾಡಿ