ದಾವಣಗೆರೆ: ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಒದಗಿಸುವ ಕಾರ್ಯಕ್ರಮದಲ್ಲಿ ಆಗಿದೆನ್ನಲಾದ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರ್ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪ್ರಿವೆನ್ಷನ್ ಹೆಲ್ತ್ ಯೋಜನೆ ಯಡಿ ಆರೋಗ್ಯ ತಪಾಸಣೆಗೆ 2022ನೇ ಸಾಲಿನಲ್ಲಿ ರಾಜ್ಯ ಮತ್ತು ಹೊರ ರಾಜ್ಯದ ಖಾಸಗಿ ಆಸ್ಪತ್ರೆಗೆ ಗುತ್ತಿಗೆ ನೀಡಲಾಗಿತ್ತು. ಅದೇ ರೀತಿ ದಾವಣಗೆರೆಯ ಆರೈಕೆ ಆಸ್ಪತ್ರೆಗೆ ನೀಡಲಾಗಿದೆ. ಯಾವುದೇ ಕಾರ್ಮಿಕರ ಗಮನಕ್ಕೂ ತರದೆ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗಿದೆ ಎನ್ನಲಾಗುತ್ತಿದೆ. ಒಬ್ಬ ಕಾರ್ಮಿಕರಿಗೆ 2954 ರೂಪಾಯಿಯಂತೆ 35, 500 ಕಾರ್ಮಿಕರಿಗೆ ತಪಾಸಣೆ ನಡೆಸಲಾಗಿದೆ ಎಂದು 9.89 ಕೋಟಿ ಹಣ ವಿತ್ ಡ್ರಾ ಮಾಡಿ ರುವುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಆರೋಗ್ಯ ತಪಾಸಣೆ ಹೆಸರಲ್ಲಿ ಹಣ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ತಿಳಿಸಿದರು. ದಾವಣಗೆರೆ ಜಿಲ್ಲೆ ಸಂಘದ ಅಧ್ಯಕ್ಷ ನಾಗರಾಜ್, ಇ. ರಾಜಪ್ಪ, ತಿಮ್ಮಯ್ಯ, ಪರಶುರಾಮ್ ಇತರರು ಇದ್ದರು

Share.
Leave A Reply

Exit mobile version