ಶಿವಮೊಗ್ಗ : ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಧಾರಾಕಾರ ಮಳೆಯಿಂದ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದೆ. ಅಲ್ಲದೇ ಈ ಕಂಬಗಳು
ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೊಸನಗರ ತಾಲೂಕಿನ ಹೊಳೆಬಾಗಿಲು ಬಳಿ ಘಟನೆ ನಡೆದಿದೆ. ಹೊಳೆಬಾಗಿಲು, ಕಳಸವಳ್ಳಿ, ತುಮರಿ ರಸ್ತೆಯಲ್ಲಿ ಸಾಕಷ್ಟು ಮಳೆಯಾಗಿದ್ದು,
ಅಲ್ಲದೇ ಹೊಸನಗರ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗುಡ್ಡ ಕುಸಿತಗೊಂಡಿದೆ