ಶಿವಮೊಗ್ಗ.
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ವತಿಯಿಂದ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಡಿ.15ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಶೇಷಾದ್ರಿ ಪುರಂನ ಗಾಂಧಿ ಭವನ ಬಾಪೂಜಿ ಸಭಾಂಗಣ ಕುಮಾರ ಪಾರ್ಕ್ ಈಸ್ಟ್ನಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ನಿಯೋಜಿತ ಅಧ್ಯಕ್ಷ ರಾಘವೇಂದ್ರ ತಾಳಗೊಪ್ಪ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸ್ವಚ್ಛ ಆಡಳಿತ ನೀಡಲು ಭ್ರಷ್ಟಾಚಾರ ಬಯಲಿಗೆ ಎಳೆಯಲು ಆಡಳಿತದಲ್ಲಿ ಸುಧಾರಣೆ ತರುವ ಹಿನ್ನಲೆಯಲ್ಲಿ ರಾಜ್ಯ ಮಾಹಿತಿ ಹಕ್ಕು ವೇದಿಕೆ ಈಗಾಗಲೇ ವರ್ಷದ ಹಿಂದೆಯೇ ಪ್ರಾರಂಭವಾಗಿದೆ. ಪ್ರಥಮ ವರ್ಷದ ವಾರ್ಷಿಕೋತ್ಸವದ ಜೊತೆಗೆ ಈಗ 5 ಜಿಲ್ಲೆಗಳಲ್ಲಿ ಪದಾಧಿಕಾರಿಗಳ ನೇಮಕವಾಗಲಿದ್ದು, ಶಿವಮೊಗ್ಗದಲ್ಲಿಯೂ ಕೂಡ ನಿಯೋಜಿತ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ವಾರ್ಷಿಕ ಕಾರ್ಯಕ್ರಮದಲ್ಲಿ ಪದಗ್ರಹಣ ನಡೆಯಲಿದೆ ಎಂದರು.
ಇದರ ಉದ್ಘಾಟನೆಯನ್ನು ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ನೆರವೇರಿಸುವರು. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹೇಮಂತ್ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬ ರೆಡ್ಡಿ, ಗ್ರಾಹಕರ ಹಕ್ಕುಗಳ ಶಿಕ್ಷಣ ಹಾಗೂ ಜಾಗೃತಿ ಟ್ರಸ್ಟಿನ ಅಧ್ಯಕ್ಷ ವೈ.ಜಿ.ಮುರಳೀಧರನ್, ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಸಂಸ್ಥಾಪಕ ವೀರೇಶ್ ಬೆಳ್ಳೂರು, ಪ್ರಮುಖರಾದ ಭೀಮಪ್ಪ ಗುಂಡಪ್ಪ, ಹೆಚ್.ಎಂ.ವೆಂಕಟೇಶ್, ಎಲ್.ಕೃಷ್ಣಮೂರ್ತಿ ಸೇರಿದಂತೆ ಎಲ್ಲ ನಿಯೋಜಿತ ಪದಾಧಿಕಾರಿಗಳು ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿರುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿಯೋಜಿತ ಪದಾಧಿಕಾರಿಗಳಾದ ಹೆಚ್.ವಿ.ಉಮೇಶ್, ಮಲ್ಲಿಕಾರ್ಜುನಯ್ಯ, ಡಾ.ನಾಗರತ್ನ, ಶಿಲ್ಪ, ಪ್ರಕಾಶ್, ಮಹೇಶ್, ಜಗದೀಶ್, ಕೃಷ್ಣಮೂರ್ತಿ, ವೀರಭದ್ರಪ್ಪ, ಮುಂತಾದವರು ಇದ್ದರು.