ಶಿವಮೊಗ್ಗ:ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕೊನೆ ದಿನವಾದ ಗುರುವಾರ ಪತ್ರಕರ್ತ ಷಡಕ್ಷರಿ, ಮಾಜಿ ಶಾಸಕ ರಘುಪತಿ ಭಟ್ ಮೈಸೂರಿನಲ್ಲಿ ನಾಮ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ರಘುಪತಿ ಭಟ್, ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು. ಇನ್ನು ಪತ್ರಕರ್ತ ಷಡಕ್ಷರಿ ಮಾತನಾಡಿ, ತತ್ವ ಸಿದ್ಧಾಂತಗಳನ್ನು ಇಟ್ಟುಕೊಂಡು ನಾನು ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಗೆಲುವು ಸೋಲು ಮುಖ್ಯವಲ್ಲ ಸ್ಫರ್ಧೆ ಮುಖ್ಯ ಎಂದರು. ಈ ಸಂದರ್ಭದಲ್ಲಿ ಪತ್ರಕರ್ತ ಎಂ.ಅಣ್ಣಪ್ಪ ಇದ್ದರು.

Share.
Leave A Reply

Exit mobile version