ದಾವಣಗೆರೆ : ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಅಖಿಲ ಭಾರತ ಕಾರ್ಯದರ್ಶಿಯಾಗಿ ದಾವಣಗೆರೆಯ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ. ಎಪ್ರಿಲ್ 29 ಹಾಗೂ 30 ರಂದು ಚೆನ್ನೈನಲ್ಲಿ ನಡೆದ ಯೂನಿಯನ್ನ ಕೇಂದ್ರ ಸಮಿತಿ ಸಭೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಅಧ್ಯಕ್ಷ ಎಂ.ಎಸ್.ಶ್ರೀನಿವಾಸನ್ ತಿಳಿಸಿದ್ದಾರೆ.
ಕೆ.ರಾಘವೇಂದ್ರ ನಾಯರಿಯವರು ಈ ಮೊದಲು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಅಖಿಲ ಭಾರತ ಸಹ ಖಜಾಂಚಿಯಾಗಿದ್ದರು. ಹಾಗೂ ಪ್ರಸ್ತುತ ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ನ ಜಂಟಿ ಕಾರ್ಯದರ್ಶಿಯಾಗಿ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿಯ ಸಹ ಕಾರ್ಯದರ್ಶಿಯಾಗಿ ಹಾಗೂ ಅಸಂಘಟಿತ ಕಾರ್ಮಿಕ ವಲಯದ ಮುಖಂಡರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಖಜಾಂಚಿ ಕೆ.ವಿಶ್ವನಾಥ್ ಬಿಲ್ಲವ ತಿಳಿಸಿದ್ದಾರೆ.