ದಾವಣಗೆರೆ: ನಗರದ ಎಂ.ಸಿ.ಸಿ ಬಿ ಬ್ಲಾಕ್ ನ ಶ್ರೀ ಸಾಯಿಬಾಬಾ ಮಂದಿರದಲ್ಲಿ ಡಿ.7 ರಂದು ಸಂಜೆ 6 ಗಂಟೆಗೆ ಕಾರ್ತಿಕೋತ್ಸವ ನಡೆಯಲಿದೆ ಎಂದು ಶ್ರೀ ಸಾಯಿ ಟ್ರಸ್ಟ್ ಕಾರ್ಯದರ್ಶಿ ಎಂ. ಶಿವಪ್ಪ ತಿಳಿಸಿದ್ದಾರೆ.
ಕಾರ್ತಿಕೋತ್ಸವ ನಿಮಿತ್ತ ಬೆಳಗ್ಗೆ 6 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಮಧ್ಯಾಹ್ನ 12 ಕ್ಕೆ ಪ್ರಸಾದ ಕಾರ್ಯಕ್ರಮವಿದ್ದು ರಾತ್ರಿ 9 ಗಂಟೆಗೆ ಶೇಜಾರತಿ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.