ದಾವಣಗೆರೆ : ನಾಯಕ ಸಮಾಜದ ಹಿರಿಯರು, ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷರು, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಚ ಟಿ.ದಾಸಕರಿಯಪ್ಪ ನಗರದ ತಮ್ಮ ಸ್ವಗೃಹದಲ್ಲಿ ಭಾನುವಾರ ತಡರಾತ್ರಿ ನಿಧನರಾದರು.
ಮೃತರು ಪತ್ನಿ, ಪುತ್ರರಾದ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಗಣೇಶ ದಾಸಕರಿಯಪ್ಪ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಯುವ ಮುಖಂಡ ಟಿ.ಶ್ರೀನಿವಾಸ ದಾಸಕರಿಯಪ್ಪ, ಮೂವರು ಪುತ್ರಿಯರೂ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಸೆ.23ರಂದು ಮಧ್ಯಾಹ್ನ 2 ಗಂಟೆ ಸ್ವಗ್ರಾಮವಾದ ದಾವಣಗೆರೆ ತಾ.ತುಂಬಿಗೆರೆ ಗ್ರಾಮದಲ್ಲಿರುವ ಸ್ವಂತ ಜಮೀನಿನಲ್ಲಿ ನಡೆಯಲಿದೆ….