ಸಾಗರ: ಹೊಸನಗರ ಕ್ಷೇತ್ರದಲ್ಲಿಈವರೆಗೆ ನಡೆಸಿದ ಪ್ರವಾಸ ಬಳಿಕ ಕೆ.ಎಸ್.ಈಶ್ವರಪ್ಪ ನವರಿಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗಿರುವುದು ಗಮನಕ್ಕೆ ಬಂದಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ವಾಟಗೋಡು ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಸ್ಥಾನಕ್ಕೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಈ ಬಾರಿ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಈಶ್ವರಪ್ಪ ಅವರು ತಮ್ಮ ಉಮೇದುವಾರಿಕೆ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ನಡೆದಿತ್ತು. ಆದರೆ ಅವರ ಸ್ಪರ್ಧೆ ಖಚಿತವಾಗಿ, ಚಿಹ್ನೆ ಲಭ್ಯವಾದ ಬಳಿಕ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ.
ಜಿಲ್ಲೆಯ ಹಲವು ಕಡೆಗಳಿಂದ ದಿನವೂ ನೂರಾರು ಮಂದಿ ಅವರ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಇದು ಅವರ ಗೆಲುವಿನ ಅಂತರವನ್ನು ಹೆಚ್ಚಿಸಲಿದೆ ಎಂದರು.