ದಾವಣಗೆರೆ:  ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛ ಮತ್ತು ಸ್ವಸ್ಥ ಸಮಾಜಕ್ಕಾಗಿ ಆಧ್ಯಾತ್ಮಿಕ ಸಬಲೀಕರಣ ಎಂಬ ಸೇವಾ ಯೋಜನೆಯ ಪ್ರಾರಂಭೋತ್ಸವ ಮತ್ತು ಪ್ರಸಾದವಾಣಿ ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ  ವೈದ್ಯರು, ಲೇಖಕರು, ಕ್ವಿಜ್ ಮಾಸ್ಟರ್ – ಥಟ್ ಅಂತ ಹೇಳಿ ಕಾರ್ಯಕ್ರಮದ ಡಾ. ನಾ. ಸೋಮೇಶ್ವರ ಅವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಧ್ಯಕ್ಷರಾದ ಬಿ ವಾಮದೇವಪ್ಪ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯಅತಿಥಿ ಯಾಗಿ ಆಗಮಿಸಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
.ಈ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ ಗೌರವ ಕಾರ್ಯದರ್ಶಿ ಬಿ. ದಿಳ್ಯಪ್ಪ, ಸಂಘಟನಾ ಕಾರ್ಯದರ್ಶಿ ಸಿ ಜಿ ಜಗದೀಶ್ ಕೂಲಂಬಿ  ಉಪಸ್ಥಿತರಿದ್ದರು.

Share.
Leave A Reply

Exit mobile version