ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಗೆ ಬೇಸತ್ತಿರುವುದಾಗಿ ಆರೋಪಿಸಿ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ಪ್ರವಾಸೋದ್ಯಮ ವಿಭಾಗದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಸಿದ ಘಟನೆ ಬುಧವಾರ ನಡೆದಿದೆ.
ವಿವಿಯಲ್ಲಿನ ಲೋಪದೋಷ ಸೇರಿದಂತೆ ಮೂಲಸೌಕರ್ಯ ಗುಣಮಟ್ಟದಿಂದ ಕೂಡಿಲ್ಲ ಎಂದು ವಿದ್ಯಾರ್ಥಿ ದೂರಿದ್ದಾನೆ. ಈ ಎಲ್ಲ ಅಂಶಗಳನ್ನು ಹಾಗೂ ಆತ್ಮಹತ್ಯೆ ಯತ್ನಕ್ಕೆ ಕಾರಣವನ್ನು ಗೆಳೆಯರ ವಾಟ್ಸಾಪ್ ಗ್ರೂಪ್ ನಲ್ಲಿ ಹಂಚಿಕೊಂಡಿರುವ ವಿದ್ಯಾರ್ಥಿ ತರಗತಿ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆದರೆ ಕುತ್ತಿಗೆಗೆ ಬಿಗಿದುಕೊಂಡಿದ್ದ ಹಗ್ಗ ತುಂಡಾಗಿ ಕೆಳಗೆ ಬಿದ್ದಿದ್ದಾನೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದ್ದು, ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.