ಶಿವಮೊಗ್ಗ: ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಬಗ್ಗೆ ಸಲ್ಲದ ಹೇಳಿಕೆ ನೀಡಿರುವ ಕುಡಚಿ ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಪರಮೇಶ್ವರ್ ಅವರಲ್ಲಿ ಕ್ಷಮೆ ಕೇಳಬೇಕು ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಕ್ಬುಲ್ ಅಹಮ್ಮದ್ ಹೇಳಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಿ. ರಾಜೀವ್ ಅವರಿಗೆ ಪರಮೇಶ್ವರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಪರಮೇಶ್ವರ್ ಅವರು ಈ ದೇಶ ಕಂಡ ಅಸಮರ್ಥ ಗೃಹ ಸಚಿವ. ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಹೇಳಿದ್ದಾರೆ. ಹೀಗೆ ಹೇಳುವ ಹಕ್ಕು ಅವರಿಗೆ ಇಲ್ಲ. ಪರಮೇಶ್ವರ್ ಅವರು ಒಬ್ಬ ಸಮರ್ಥ ಗೃಹ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರೊಬ್ಬ ನಾಯಕರೂ ಹೌದು. ಅಂತಹವರ ಬಗ್ಗೆ ಪಿ. ರಾಜೀವ್ ಅಹವೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜೀವ್ ಅವರಿಗೆ ಕುಡಚಿ ಕ್ಷೇತ್ರದ ಜನ ಸರಿಯಾದ ಪಾಠ ಕಲಿಸಿದ್ದಾರೆ. ಅದನ್ನು ಅವರು ಮರೆತಂತೆ ಇದೆ. ಬಿಜೆಪಿ ನಾಯಕರನ್ನು ಮೆಚ್ಚಿಸಲು ಇಂತಹ ಹೇಳಿಕೆ ನೀಡಿದ್ದಾರೆ. ಆದ್ದರಿಂದ ರಾಜೀವ್ ಕೂಡಲೇ ಗೃಹಮಂತ್ರಿ ಮತ್ತು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶೋಷಿತ ಸಮುದಾಯಗಳ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಹೆಚ್.ಎನ್. ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ, ಪ್ರಮುಖರಾದ ಖಲಂದರ್, ಹಬೀಬುಲ್ಲಾ, ರಾಮಕೃಷ್ಣ, ಅನ್ವರ್ ಪಾಶಾ, ಸೈಯದ್ ಜಮೀರ್, ಇಮ್ತಿಯಾಜ್ ಇದ್ದರು.

Share.
Leave A Reply

Exit mobile version