ದಾವಣಗೆರೆ : ರಾಜ್ಯ ಬಿಜೆಪಿ 20 ಕ್ಷೇತ್ರಗಳಿಗೆ ತನ್ನ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಅದೇ ರೀತಿ ರಾಜ್ಯ ಕಾಂಗ್ರೆಸ್ ಕೂಡ ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳನ್ನ ಫೈನಲ್ ಮಾಡಿತ್ತು. ಇದೀಗ ಬಹುನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಕರ್ನಾಟಕದ 2ನೇ ಪಟ್ಟಿ ಬಿಡುಗಡೆ ಆಗಿದೆ. ಆ ಪಟ್ಟಿಯಲ್ಲಿ ಯಾರಿಗೆಲ್ಲಾ ಅವಕಾಶ ಸಿಕ್ಕಿದೆ ಗೊತ್ತಾ..?

 1. ಚಿತ್ರದುರ್ಗ – ಚಂದ್ರಪ್ಪ

2. ರಾಯಚೂರು – ಕುಮಾರ ನಾಯ್ಕ್

3. ಬೆಳಗಾವಿ -ಮೃಣಾಲ್ ಹೆಬ್ಬಾಳ್ಕರ್

4. ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ

5. ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್

6. ಧಾರವಾಡ – ವಿನೋದ್ ಅಸೂಟಿ

7. ಕೊಪ್ಪಳ – ರಾಜಶೇಖರ ಹಿಟ್ನಾಳ್

8. ಕಲಬುರಗಿ – ರಾಧಾಕೃಷ್ಣ ದೊಡ್ಮನಿ

9. ಬೀದರ್ – ಸಾಗರ್ ಖಂಡ್ರೆ

10. ದಕ್ಷಿಣ ಕನ್ನಡ – ಪದ್ಮರಾಜ್

11. ಮೈಸೂರು – ಎಂ.ಲಕ್ಷ್ಮಣ

12. ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ

13. ಬೆಂಗಳೂರು ಕೇಂದ್ರ -ಮನ್ಸೂರ್ ಅಲಿ ಖಾನ್

14. ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ

15. ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್

16. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್

ಅಂತಿಮವಾಗದ ಕ್ಷೇತ್ರಗಳಿವು

1. ಕೋಲಾರ

2. ಚಾಮರಾಜನಗರ

3. ಚಿಕ್ಕಬಳ್ಳಾಪುರ

4. ಬಳ್ಳಾರಿ

ಒಂದೆಡೆ ರಾಜ್ಯದಲ್ಲಿ ಬಂಡಾಯದ ಬಿಸಿ ಹೆಚ್ಚಾಗಿರುವ ಕಾರಣ ಇತ್ತ ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. 4 ಕ್ಷೇತ್ರ ಬಾಕಿ ಉಳಿಸಿಕೊಂಡಿದ್ದೇವೆ ಎಂದು ದೆಹಲಿಯಿಂದ ಬೆಂಗಳೂರಿಗೆ ಮರಳಿರುವ ಸಿಎಂ, ಡಿಸಿಎಂ ಹೇಳಿದ್ದಾರೆ. ಕಾಂಗ್ರೆಸ್​ನಿಂದ ಬಿಜೆಪಿ ನಾಯಕರಿಗೆ ಗಾಳ ಹಾಕುವ ವಿಚಾರವಾಗಿ ಬಹಿರಂಗವಾಗಿ ಮಾತನಾಡಲು ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.

ಬೇರೆ ಪಕ್ಷದ ನಾಯಕರು ಕಾಂಗ್ರೆಸ್​ಗೆ ಬರುವ ಬಗ್ಗೆ ಬಹಿರಂಗವಾಗಿ ಮಾತನಾಡಲ್ಲ, ಕೆಲವು ಸಂಸದರ ಕಾಂಗ್ರೆಸ್ ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ಸಚಿವರ ಕುಟುಂಬದವರಿಗೆ ಲೋಕಸಭಾ ಚುನಾವಣಾ ಟಿಕೆಟ್ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಡಿಕೆ ಶಿವಕುಮಾರ್, “ರಾಜಕೀಯ ವ್ಯವಸ್ಥೆಯಲ್ಲಿ ಕೆಲಸ ಮಾಡಿರುವವರಿಗೂ ಹೊಸ ಅಭ್ಯರ್ಥಿಗಳನ್ನು ತರುವುದಕ್ಕೂ ವ್ಯತ್ಯಾಸವಿದೆ.

ಇಡೀ ದೇಶದಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇನ್ನು 50% ವಿದ್ಯಾವಂತ ಯುವಕರಿಗೆ ಅವಕಾಶ ನೀಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಅದೇನೇ ಇದ್ರೂ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದರಿಂದ ಬಂಡಾಯದ ಬೆಂಕಿ ಧಗಧಗ ಹೊತ್ತಿ ಉರಿಯುತ್ತಿದೆ. ಪರಿಸ್ಥಿತಿ ಹೀಗಿರೋವಾಗ್ಲೇ, ಇದೀಗ ರಾಜ್ಯ ಕಾಂಗ್ರೆಸ್ ತನ್ನ ಎರಡನೇ ಪಟ್ಟಿ ಬಿಡುಗಡೆಮಾಡಿದ್ದು ಕಾಂಗ್ರೆಸ್​​ನಲ್ಲೂ ಬಂಡಾಯದ ಬಿಸಿ ತಟ್ಟಿದೆ. ಅದರ ಒಂದು ಭಾಗ ಎಂಬಂತೆ ಬಾಗಲಕೋಟೆ ಟಿಕೆಟ್​​ಗಾಗಿ ವೀಣಾ ಕಾಶಪ್ಪನವರ್​ ಅಸಮಾಧಾನ ಹೊರಹಾಕಿದ್ದಾರೆ. ಆದ್ರೆ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಹೊತ್ತಿಕೊಂಡಷ್ಟು ದೊಡ್ಡ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಬಂಡಾಯದ ಬಿಸಿ ಕಾಣಿಸೋದು ಅನುಮಾನ ಎನ್ನಲಾಗುತ್ತಿದೆ. ಇನ್ನ ರಾಜ್ಯ ಕಾಂಗ್ರೆಸ್ ನಾಯಕರು ಅಳೆದೂ ತೂಗಿ ಅಭ್ಯರ್ಥಿಗಳನ್ನೇನೂ ಫೈನಲ್ ಮಾಡಿದ್ದಾರೆ. ಇನ್ಮೇಲೆ ಆ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರೋದು ಹೇಗೆ ಅನ್ನೋದ್ರ ರಣತಂತ್ರ ರೆಡಿಯಾಗಬೇಕಾಗಿದೆ.. ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಅಖಾಡದಲ್ಲಿರೋ ಎದುರಾಳಿಗಳ ರಣತಂತ್ರಗಳಿಗೆ ತಕ್ಕಂತೆ ಪ್ರತಿ ರಾಜಕೀಯ ಪಕ್ಷಗಳವೂ ಪ್ರತಿ ತಂತ್ರವನ್ನ ಹೆಣೆಯಬೇಕಾಗುತ್ತೆ.

Share.
Leave A Reply

Exit mobile version