ಭದ್ರಾವತಿ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಫೆ. 26 ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.