ನ್ಯಾಮತಿ; ವ್ಯಕ್ತಿಯೊಬ್ಬರು ದೀರ್ಘಕಾಲದ ಅನಾರೋಗ್ಯದಿಂದ ಗುಣಮುಖರಾಗದ ಹಿನ್ನಲೆ ಮನನೊಂದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈಚೆಗೆ (ಬುಧವಾರ) ನಡೆದಿದೆ.
ತಾಲೂಕಿ ಯರಗನಾಳ್ ಗ್ರಾಮದ ಶಿವಾನಂದಪ್ಪ ಎ.ಕೆ(೫೯) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕಳೆದ ನಾಲ್ಕು ವರ್ಷಗಳ ಹಿಂದೆ ತಮ್ಮ ಕೈಕಾಲು ಸ್ವಾಧೀನ ಕಳೆದುಕೊಂಡಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರು ಗುಣಮುಖರಾಗದ ಹಿನ್ನಲೆ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.