ಭದ್ರಾವತಿ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಭದ್ರಾವತಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಆದ ಮಣಿ ಶೇಖರ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಗೆ ಸಹಕರಿಸಿದ ಕೆಆರ್ಡಿಎಲ್ ನ ಅಧ್ಯಕ್ಷರು ಶಾಸಕ ಬಿ.ಕೆ. ಸಂಗಮೇಶ್ವರ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಹಾಗೂ ನಗರ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಹಕರಿಸಿದ ಕಾಂಗ್ರೆಸ್ ಪಕ್ಷದ ಮುಖಂಡರು ಗಳಿಗೆ ಮಣಿಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.