
ದಾವಣಗೆರೆ: ಸ್ವಾತಂತ್ರ್ಯಹೋರಾಟದಲ್ಲಿ ವೀರ ಮರಣ ಹೊಂದಿದ ಸ್ವತಂತ್ರ ಹೋರಾಟಗಾರರ ನೆನಪಿಗಾಗಿ ಜ.30 ರಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಹುತಾತ್ಮರ ನೆನಪಿನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕ.ರಾ.ರೈ.ಸಂ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರಸ್ವಾಮಿ ಸಾನ್ನಿಧ್ಯ ವಹಿಸಲಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ರಾಂಪುರದ ಬಸವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಹುತಾತ್ಮರನ್ನು ನೆನಪಿಸಿಕೊಳ್ಳುವುದಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಆಹಾರ ಭದ್ರತೆಗಾಗಿ ಭೂಮಿಯಲ್ಲಿ ಹಗಲಿರುಳು ಶ್ರಮಿಸಿ, ರೈತ ಚಳವಳಿಯಲ್ಲಿ ಹುತಾತ್ಮರಾದ ರೈತ ಹುತಾತ್ಮರ ನೆನಪಿಗಾಗಿ ಹಾಗೂ ಹಕ್ಕಿಗಾಗಿ ಹಗಲಿರುಳು ಶ್ರಮಿಸಿ, ತಮ್ಮ ತ್ಯಾಗವನ್ನು ಬಲಿದಾನವಾಗಿ ಮಾಡಿರುವಂತಹ ಪೂರ್ವಜರನ್ನು ನೆನಪಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.


ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮುಖ್ಯಮಂತ್ರಿಗಳ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ್, ಸುವರ್ಣಟಿವಿ ಮುಖ್ಯಸ್ಥ ಅಜಿತ್ ಹನುಮಕ್ಕನವರ್, ಶಾಸಕ ಬಸವಂತಪ್ಪ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತೇಜಸ್ವಿ ಪಟೇಲ್, ಕೆ.ಜಿ.ಯಲ್ಲಪ್ಪ, ಪೂಜಾರ್ ಅಂಜಿನಪ್ಪ,, ತಿರುಮಲ್ಲೇಶ್, ಚಂದ್ರಶೇಖರ್, ಹೆಚ್.ವಿಜಯ್ ಕುಮಾರ್, ಚಂದ್ರಶೇಖರ್, ಪ್ರಕಾಶ್ ನಲ್ಲೂರು, ಶಿವಯೋಗಯ್ಯ, ಲೋಕನಗೌಡ್ರು ಇತರರು ಇದ್ದರು

