
ದಾವಣಗೆರೆ : ನಗರದ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ನ.27 ಕ್ಕೆ ಸಚಿವರು, ಶಾಸಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ವೀರೇಶ ಎಸ್ ಒಡೇನಪುರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮತ್ತು ವಿಚಾರ ಸಂಕಿರಣ, ರಾಜ್ಯೋತ್ಸವ, 2022-2023 ನೇ ಸಾಲಿನ ವಾರ್ಷಿಕ ಮಹಾಸಭೆ, ಗಂಗಾವತಿ ಪ್ರಾಣೇಶ್ ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದರು.
ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ, ರಾಜ್ಯಾಧ್ಯಕ್ಷ ಷಡಕ್ಷರಿಯಿಂದ ಪ್ರತಿಭಾ ಪುರಸ್ಕಾರ ಪ್ರದಾನ ನಡೆಯಲಿದೆ. ಶಾಸಕರಾದ ಡಿ.ಜಿ.ಶಾಂತನಗೌಡ, ಬಿ.ಪಿ.ಹರೀಶ್, ಬಿ.ದೇವೇಂದ್ರಪ್ಪ, ಕೆ.ಎಸ್.ಬಸವಂತಪ್ಪ, ಬಸವರಾಜು ವಿ ಶಿವಗಂಗಾ ಆಗಮಿಸುವರು.


ಡಿಸಿ ಡಾ.ವೆಂಕಟೇಶ್, ಸಿಇಒ ಡಾ.ಸುರೇಶ್ ಬಿ. ಇಟ್ನಾಳ್, ಎಸ್ಪಿ ಉಮಾ ಪ್ರಶಾಂತ್ ಆಗಮಿಸುವರು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಗುರುಮೂರ್ತಿ, ಜಿಲ್ಲಾ ಖಜಾಂಚಿ ಬಿ.ಆರ್.ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಬಿ.ಪಾಲಾಕ್ಷಿ ಇದ್ದರು.