ದಾವಣಗೆರೆ : ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ರಾಜ್ಯದ ಆರ್ಥಿಕ ಶಿಸ್ತಿನ ದಾಖಲೆಯನ್ನು ಮುರಿದು, ಅತ್ಯಂತ ಹೆಚ್ಚು ಸಾಲ ಮಾಡಿದ ದಾಖಲೆ ಮಾಡಿದ್ದಾರೆ ಎಂದು ಬಿಜೆಪಿ ಯುವ ನಾಯಕ ಜಿ.ಎಸ್.ಅನಿತ್ ಕುಮಾರ್ ಪ್ರಕಟಣೆ ಮೂಲಕ ಟೀಕಿಸಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆ ಈ ಬಜೆಟ್ ನ ಪ್ರಮುಖ ಅಂಶ ರೈತಪರ ಯಾವುದೇ ಹೊಸ. ಯೋಜನೆಗಳಿಲ್ಲದ ನಿರಾಶಾದಾಯಕ ಬಜೆಟ್ ಇದಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೋಗಸ್ ಬಜೆಟ್ ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು!!

ಕಾಂಗ್ರೆಸ್‌ ಪಕ್ಷಕ್ಕೆ ಬಾಬಾ ಸಾಹೇಬರ ಮೇಲೆ ಎಷ್ಟು ದ್ವೇಷವಿದೆ ಎಂಬುದು ಸಿದ್ದರಾಮಯ್ಯ ಅವರ ಸಂವಿಧಾನ ವಿರೋಧಿ ಬಜೆಟ್‌ ನಿಂದ ಮತ್ತೊಮ್ಮೆ ಜಗಜ್ಜಾಹೀರಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಘೋಷಣೆ ಮಾಡಿದ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಆಗಿಲ್ಲ..ಮತ್ತು ಈ ಬಜೆಟ್ ನಲ್ಲಿ ಚಿತ್ರದುರ್ಗ , ದಾವಣಗೆರೆ ಜಿಲ್ಲೆಗೆ ಯಾವುದೇ ಯೋಜನೆ ಘೋಷಣೆ ಮಾಡದೆ ಮಧ್ಯ ಕರ್ನಾಟಕ ಜಿಲ್ಲೆಗಳನ್ನು ಕಡೆಗಣಿಸಿದ್ದಾರೆ ಎಂದಿದ್ದಾರೆ.

Share.
Leave A Reply

Exit mobile version