ದಾವಣಗೆರೆ: ಅಖಿಲ ಭಾರತರಾಷ್ಟ್ರೀಯ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಶಾಮನೂರು ಶಿವಶಂಕರಪ್ಪರಿಗೆ ದಿಢೀರ್ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಯಾವ ಭೀತಿಯೂ ಇಲ್ಲ. ತಕ್ಷಣವೇ ಅವರನ್ನು ದಾವಣಗೆರೆಯ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಕಫದ ಸಮಸ್ಯೆಯಿಂದಾಗಿ ಅಸ್ವಸ್ಥರಾಗಿ ಶಾಮನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೇ ಕಾಲು ನೋವಿನಿಂದ ಬಳಲುತ್ತಿದ್ದರು.

ನಂತರ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಶೀಘ್ರವೇ ತಮ್ಮದೇ ಒಡೆತನದ ಎಸ್.ಎಸ್. ಆಸ್ಪತ್ರೆಗೆ ದಾಖಲು ಮಾಡಿದರು. ನಂತರ ವೈದ್ಯರು ನಾನಾ ತರಹದ ಟೆಸ್ಟ್ಗಳನ್ನು ಮಾಡಿ ಕಫ್ ಹೊರತೆಗೆದರು. ಎಂದು ಪ್ರಾಥಮಿಕ ವರದಿಗಳು ಹೇಳಿದೆ.

೯೪ ವರ್ಷದ ಶಾಮನೂರು ಶಿವಶಂಕರಪ್ಪ, ಹಾಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಚಿಕಿತ್ಸೆ ನಂತರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ಶಾಸಕರಿಗೆ ಏನು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಒಂದಿಷ್ಟು ಕಫದ ಸಮಸ್ಯೆ ಇತ್ತು. ಅದನ್ನು ವೈದ್ಯರು ತೆಗೆದಿದ್ದಾರೆ. ಸದ್ಯ ಅವರು ಚೆನ್ನಾಗಿದ್ದು, ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದರು.

Share.
Leave A Reply

Exit mobile version