ದಾವಣಗೆರೆ : ಪಂಚರಾಜ್ಯ ಚುನಾವಣೆಗಳಲ್ಲಿ ದೇಶದ ಭರವಸೆ ಬಿಜೆಪಿ ಹಾಗೂ ಮೋದಿಜೀ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಾಲ್ಕು ರಾಜ್ಯಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಮತದಾರ ಸ್ಪಷ್ಟ ತೀರ್ಪು ನೀಡಿದ್ದಾನೆ. ಉತ್ತರ ಭಾರತದ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿಗೆ ಭಾರಿ ಗೆಲುವು ದಕ್ಕಿದೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ ಕೆ.ಬಿ.ಕೊಟ್ರೇಶ್ ಹೇಳಿದರು.
ದಾವಣಗೆರೆ ವಿಜಯೊಂದಿಗೆ ಮಾತನಾಡಿ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್’ಗಢ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ಭರ್ಜರಿ ಗೆಲುವು ನೀಡಿದ ಅಲ್ಲಿನ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಕೇಂದ್ರ ಸರ್ಕಾರದ ಸ್ವಾವಲಂಬಿ ಇಂಡಿಯಾದ ಕಾರ್ಯಸೂಚಿಯು ಮೂರು ರಾಜ್ಯಗಳಲ್ಲಿ ಹ್ಯಾಟ್ರಿಕ್ ಫಲಿತಾಂಶ ನೀಡಿರುವುದು ಸಂತಸ ತಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯು ‘ಹ್ಯಾಟ್ರಿಕ್ ಗೆಲುವು’ ಸಾಧಿಸುವುದರಲ್ಲಿ ಎಳ್ಳಷ್ಟು ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು
ಕಾಂಗ್ರೆಸ್ , ಬಿಜೆಪಿ ನಡುವೆ ನೇರಾಹಣಿ ಇತ್ತು
2018ರಲ್ಲಿ ಈ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸಗಢವನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ಮಧ್ಯಪ್ರದೇಶದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರವನ್ನೂ ರಚಿಸಿತ್ತು .ಈ ಮೂರೂ ರಾಜ್ಯಗಳಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು.
ಕರ್ನಾಟಕದಲ್ಲಿ ಮಾಡಿದ ತಪ್ಪು ಮಾಡಲಿಲ್ಲ
ಬಿಜೆಪಿ ಕರ್ನಾಟಕದಲ್ಲಿ ಮಾಡಿದ ತಪ್ಪುಗಳನ್ನು ಮಾಡಲಿಲ್ಲ. ಬದಲಾಗಿ ಗೆಲವೇ ಮಾನದಂಡವಾಗಿತ್ತು. ಅಲ್ಲದೇ
ಎಲ್ಲ ನಾಲ್ಕು ರಾಜ್ಯಗಳಲ್ಲಿಯೂ ಚುನಾವಣಾ ನಿರ್ವಹಣೆಯನ್ನು ಬಿಜೆಪಿಯ ವರಿಷ್ಠರೇ ತಮ್ಮ ಕೈಯಲ್ಲಿ ಇರಿಸಿಕೊಂಡಿದ್ದರು. ಸ್ಥಳೀಯ ನಾಯಕತ್ವದ ಕೈಗೆ ಪ್ರಚಾರದ ಚುಕ್ಕಾಣಿಯನ್ನು ಕೊಟ್ಟಿರಲಿಲ್ಲ. ಮುಖ್ಯಮಂತ್ರಿ ಅಭ್ಯರ್ಥಿ ಯನ್ನೂ ಘೋಷಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೋಡಿಯು ಪ್ರಚಾರದ ಹೊಣೆಗಾರಿಕೆಯನ್ನು ಹೆಗಲಿಗೇರಿಸಿಕೊಂಡಿತ್ತು.
ಪ್ರಚಾರಕ್ಕೆ ಬಂದ್ರೂ ದೊಡ್ಡ ನಾಯಕರು
ವರ್ಚಸ್ವೀ ನಾಯಕರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮುಂತಾದವರನ್ನೂ ಪ್ರಚಾರಕ್ಕೆ ಬಳಸಿಕೊಳ್ಳಲಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷವು ಚುನಾವಣೆಯನ್ನು ಹೆಚ್ಚು ಸ್ಥಳೀಯಗೊಳಿಸುವ ಕಾರ್ಯತಂತ್ರ ಅನುಸರಿಸಿತು.
ಸ್ಥಳೀಯ ನಾಯಕರೇ ಪ್ರಚಾರದ ನೇತೃತ್ವ ವಹಿಸಿದ್ದರು. ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿನಿಲ್ಲಲು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಮತ್ತು ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಮಾಡಿದ ಪ್ರಯತ್ನ ಸಾಲಲಿಲ್ಲ. ಮಧ್ಯಪ್ರದೇಶದಲ್ಲಿ ನೀಡಿದ ‘ಗ್ಯಾರಂಟಿ’ಗಳಲ್ಲಿ ಹಲವು ಅಲ್ಲಿ ಈಗಾಗಲೇ ಜಾರಿಯಲ್ಲಿದ್ದ ಯೋಜನೆಗಳ ಮುಂದುವರಿದ ಭಾಗವಾಗಿತ್ತು ಈ ಎಲ್ಲ ಕಾರಣಗಳಿಂದ ಬಿಜೆಪಿ ಗೆದ್ದಿದೆ ಎಂದು ಕೆ.ಬಿ.ಕೊಟ್ರೇಶ್ ಹೇಳಿದರು.