ದಾವಣಗೆರೆ: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದ್ದು, ಬಿಜೆಪಿ ನಾಯಕ ಜಿ.ಎಸ್.ಅನಿತ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಅಸ್ವಸ್ಥಗೊಂಡವರನ್ನು ಚನ್ನಗಿರಿ, ಶಿವಮೊಗ್ಗದ ಮೆಗ್ಗಾನ್, ಭದ್ರಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಧೈರ್ಯ ತುಂಬಿ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ
ಮಕ್ಕಳ ಆರೋಗ್ಯ ವಿಚಾರಿಸಿ ನಿಮ್ಮ ಜತೆ ನಾನಿದ್ದೇನೆ ಎಂದರು.
ಗ್ರಾಮದಲ್ಲಿ ಮೊದಲು ನಾಲ್ಕು ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದ್ದು, ಬಳಿಕ ಗ್ರಾಮದ 25 ಜನರು ವಾತಿ-ಭೇದಿ ಬಳಲಿ ಅಸ್ವಸ್ಥಗೊಂಡಿದ್ದು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ ಏಳು ಜನರು ಅಸ್ವಸ್ಥಗೊಂಡು ಗುಣಮುಖರಾದ ಬೆನ್ನಲ್ಲೇ ಇದೀಗ ಜೋಳದಾಳು ಗ್ರಾಮದಲ್ಲಿ ಕುಲುಷಿತ ನೀರು ಸೇವಿಸಿ 25 ಜನರು ಅಸ್ವಸ್ಥಗೊಂಡಿದ್ದಾರೆ. ಜೋಳದಾಳು ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ, ಜನರು ನೀರನ್ನು ಕುದಿಸಿ ಕುಡಿಯುವಂತೆ ಸಲಹೆ ನೀಡಿದ್ದಾರೆ.
ಸದಸ್ಯ ಅಸ್ವಸ್ಥಗೊಂಡವರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಚನ್ನಗಿರಿ ಬಿಜೆಪಿ ಮುಖಂಡರಾದ ಎಚ್.ಎಸ್ ಶಿವಕುಮಾರ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರು ಗೌಡ್ರು , ಮುಖಂಡರಾದ ಟಿ.ವಿ ರಾಜು ಪಟೇಲ್ ಹಾಗು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.